ಮುಂಬೈ: ಮುಂಬೈ ಮತ್ತು ಅಕ್ಕಪಕ್ಕದ ನಗರಗಳಲ್ಲಿ ಮಂಗಳವಾರ ಬೆಳಿಗ್ಗೆ ಭಾರಿ ಮಳೆಯಾಗಿದ್ದು, ಮತ್ತಷ್ಟು ಮಳೆಯಾಗುವ ಸಾಧ್ಯತೆ ಇದೆ ಎಂದು ಭಾರತೀಯ ಹವಾಮಾನ ಇಲಾಖೆ (ಐಎಂಡಿ) ಮುನ್ಸೂಚನೆ ನೀಡಿದೆ.
ರಾಯಗಡ, ರತ್ನಗಿರಿ ಮತ್ತು ಸತಾರಾ ಜಿಲ್ಲೆಯ ಕೆಲ ಭಾಗಗಳಲ್ಲಿ ಧಾರಾಕಾರ ಮಳೆಯಾಗಲಿದೆ ಎಂದು ಐಎಂಡಿ ಹೇಳಿದ್ದು, ಆರೇಂಜ್ ಅಲರ್ಟ್ ಘೋಷಿಸಿದೆ.