ತಿರುವನಂತಪುರ: ಐಎಎಸ್ ಅಧಿಕಾರಿಗಳನ್ನು ಪದೇ ಪದೇ ವರ್ಗಾವಣೆ ಮಾಡಲಾಗುತ್ತಿದೆ ಎಂದು ಐಎಎಸ್ ಅಸೋಸಿಯೇಷನ್ ಆರೋಪಿಸಿದೆ. ಸಂಘದ ಪದಾಧಿಕಾರಿಗಳು ನೇರವಾಗಿ ಮುಖ್ಯಮಂತ್ರಿಯನ್ನು ಭೇಟಿ ಮಾಡಿ ಈ ವಿಷಯದ ಬಗ್ಗೆ ಅತೃಪ್ತಿ ವ್ಯಕ್ತಪಡಿಸಿದೆ.
ಎರಡು ವರ್ಷಗಳ ವರೆಗೆ ಒಂದು ಸ್ಥಳದಲ್ಲಿ ನಿಯೋಜನೆಗೊಂಡವರನ್ನು ಬೇರೆಡೆ ವರ್ಗಾಯಿಸಬಾರದು ಎಂಬುದು ನಿಯಮ. ಆದರೆ ಈಗ ಈ ನಿಯಮಗಳನ್ನು ಪಾಲಿಸುತ್ತಿಲ್ಲ ಎಂದು ಸಂಘ ಟೀಕಿಸುತ್ತದೆ. ಕೆಲ ಅಧಿಕಾರಿಗಳು ಪದೇ ಪದೇ ವರ್ಗಾವಣೆಯಾಗುತ್ತಿರುವ ಹಿನ್ನೆಲೆಯಲ್ಲಿ ಸಂಘದ ಟೀಕೆ ವ್ಯಕ್ತವಾಗಿದೆ ಎಂದು ವರದಿಯಾಗಿದೆ.
ಈ ಹಿಂದೆ ಜಿಲ್ಲಾಧಿಕಾರಿ ಹುದ್ದೆ ಹಾಗೂ ಕಿರಿಯ ಹುದ್ದೆಗಳಿಗೆ ಹಿರಿಯ ಅಧಿಕಾರಿಗಳನ್ನು ನೇಮಿಸುವ ವಿಚಾರದಲ್ಲಿ ಸಂಘದೊಳಗೆ ಅಸಮಾಧಾನವಿತ್ತು. ಎರಡು ತಿಂಗಳ ಹಿಂದೆ ನಡೆದ ಸಂಘದ ಕಾರ್ಯಕಾರಿಣಿ ಸಭೆಯಲ್ಲಿ ಮನವಿ ಸಲ್ಲಿಸಲು ತೀರ್ಮಾನಿಸಲಾಗಿತ್ತು. ಒಂದು ತಿಂಗಳ ಹಿಂದೆ ಸಂಘದವರು ಮುಖ್ಯ ಕಾರ್ಯದರ್ಶಿಗೆ ಮನವಿ ಸಲ್ಲಿಸಿದ್ದರು. ಆದರೆ ಈ ನಿಟ್ಟಿನಲ್ಲಿ ಯಾವುದೇ ಮಹತ್ವದ ಕ್ರಮಗಳನ್ನು ಕೈಗೊಳ್ಳದ ಹಿನ್ನೆಲೆಯಲ್ಲಿ ಸಂಘವು ನೇರವಾಗಿ ಮುಖ್ಯಮಂತ್ರಿಯನ್ನು ಭೇಟಿ ಮಾಡಿದೆ.
ಸ್ಥಳಾಂತರ ಸೇರಿದಂತೆ ನಿಯಮಾನುಸಾರ ನಡೆಯಬೇಕು ಎಂದು ಸಂಘ ಒತ್ತಾಯಿಸಿದೆ. ಸಮಸ್ಯೆಗಳನ್ನು ಬಗೆಹರಿಸುವುದಾಗಿ ಭರವಸೆ ನೀಡಿ ಮುಖ್ಯಮಂತ್ರಿ ಸಂಘದ ಪದಾಧಿಕಾರಿಗಳನ್ನು ಸಮಧಾನಪಡಿಸಿರುವುದಾಗಿ ತಿಳಿದುಬಂದಿದೆ.
ಆಗಾಗ್ಗೆ ಸ್ಥಳಾಂತರ; ನಿಯಮಗಳನ್ನು ಅನುಸರಿಸುತ್ತಿಲ್ಲ; ಐಎಎಸ್ ಅಸೋಸಿಯೇಷನ್ ನಿಂದ ಮುಖ್ಯಮಂತ್ರಿಯ ಭೇಟಿಯಾಗಿ ಮನವಿ
0
ಸೆಪ್ಟೆಂಬರ್ 30, 2022
Tags