ಕಾಸರಗೋಡು: ಕೈಗಾರಿಕೆ ಮತ್ತು ವಾಣಿಜ್ಯ ಇಲಾಖೆಯ ಅನಂತಪುರಂ ಕೈಗಾರಿಕಾ ಪ್ರಾಂಗಣಕ್ಕಿರುವ ಪೂರಕ ರಸ್ತೆ ಕಾಮಗಾರಿಯನ್ನು ಶಾಸಕ ಎ.ಕೆ.ಎಂ.ಅಶ್ರಫ್ ಉದ್ಘಾಟಿಸಿದರು. ಪುತ್ತಿಗೆ ಗ್ರಾಮ ಪಂಚಾಯಿತಿ ಅಧ್ಯಕ್ಷ ಡಿ.ಸುಬ್ಬಣ್ಣ ಆಳ್ವ ಅಧ್ಯಕ್ಷತೆ ವಹಿಸಿದ್ದರು.
ಕಾಸರಗೋಡು ಅಭಿವೃದ್ಧಿ ಪ್ಯಾಕೇಜ್ ಅನ್ವಯ 3 ಕೋಟಿ ರೂ. ವಎಚ್ಚದಲ್ಲಿ ಅನಂತಪುರದಿಂದ ನಾಯ್ಕಾಪು ವರೆಗಿನ ಎರಡು ಎಸ್ಟೇಟ್‍ಗಳನ್ನು ಸಂಪರ್ಕಿಸುವ ರಸ್ತೆ ನಿರ್ಮಾಣ ಕಾಮಗಾರಿಗೆ ಚಾಲನೆ ನೀಡಲಾಗಿದೆ. ಕಾಸರಗೋಡು ಅಭಿವೃದ್ಧಿ ಪ್ಯಾಕೇಜ್ ವಿಶೇಷಾಧಿಕಾರಿ ಇ.ಪಿ.ರಾಜಮೋಹನ್, ಹಾರ್ಬರ್ ಎಂಜಿನಿಯರಿಂಗ್ ವಿಭಾಗದ ಸಹಾಯಕ ಎಂಜಿನಿಯರ್ ಕೆ.ರಾಜೀವನ್ ಉಪಸ್ಥಿತರಿದ್ದರು. ಜಿಲ್ಲಾ ಕೈಗಾರಿಕಾ ಕೇಂದ್ರದ ಪ್ರಧಾನ ವ್ಯವಸ್ಥಾಪಕ ಕೆ.ಸಜಿತ್ ಕುಮಾರ್ ಸ್ವಾಗತಿಸಿದರು. ಉದ್ಯಮಿ ಅರುಣಾಕ್ಷಿ ವಂದಿಸಿದರು. ಪ್ರಸಕ್ತ ರಸ್ತೆ ಸಂಪೂರ್ಣ ಶಿಥಿಲಗೊಂಡಿದ್ದು, ಕೈಗಾರಿಕಾ ಪ್ರಾಂಗಣ ಹಾಗೂ ಅನಂತಪುರ ಶ್ರೀ ಅನಂತಪದ್ಮನಾಭ ಸ್ವಾಮಿ ದೇವಸ್ಥಾನಕ್ಕೆ ತೆರಳುವವರಿಗೆ ಹೆಚ್ಚಿನ ಸಮಸ್ಯೆ ತಲೆದೋರಿತ್ತು.
ಅನಂತಪುರ ಕೈಗಾರಿಕಾ ಪ್ರಾಂಗಣ ಸಂಪರ್ಕ ರಸ್ತೆ ಕಾಮಗಾರಿಗೆ ಚಾಲನೆ
0
ಸೆಪ್ಟೆಂಬರ್ 06, 2022
Tags