ನವದೆಹಲಿ: ಭಾರತ್ ಬಯೋಟೆಕ್ ಅಭಿವೃದ್ಧಿಪಡಿಸಿರುವ, ಮೂಗಿನ ಮೂಲಕ ನೀಡಬಹುದಾದ ಕೋವಿಡ್ ಲಸಿಕೆಯನ್ನು 18 ವರ್ಷ ಮೇಲ್ಟಟ್ಟವರಿಗೆ ತುರ್ತು ಸಂದರ್ಭದಲ್ಲಿ ಸೀಮಿತವಾಗಿ ಬಳಸಲು ಭಾರತೀಯ ಔಷಧ ಮಹಾನಿಯಂತ್ರಿಕರು (ಡಿಸಿಜಿಐ) ಮಂಗಳವಾರ ಅನುಮತಿ ನೀಡಿದ್ದಾರೆ.
'ಹೈದರಾಬಾದ್‌ನ ಭಾರತ್ ಬಯೋಟೆಕ್ ಅಭಿವೃದ್ಧಿಪಡಿಸಿ, ತಯಾರಿಸಿರುವ, ಮೂಗಿನ ಮೂಲಕ ನೀಡಬಹುದಾದ ಕೋವಿಡ್ ಲಸಿಕೆಯ ಸೀಮಿತ ಬಳಕೆಗೆ ಡಿಸಿಜಿಐ ಅನುಮತಿ ನೀಡಿರುವುದು, ಕೋವಿಡ್-19 ವಿರುದ್ಧ ಭಾರತ ನಡೆಸುತ್ತಿರುವ ಹೋರಾಟಕ್ಕೆ ಮತ್ತಷ್ಟು ಶಕ್ತಿ ತುಂಬಿದಂತಾಗಿದೆ' ಎಂದು ಕೇಂದ್ರ ಆರೋಗ್ಯ ಸಚಿವ ಮನ್ಸುಖ್ ಮಾಂಡವಿಯಾ ಟ್ವೀಟ್ ಮಾಡಿದ್ದಾರೆ.
ಭಾರತ್ ಬಯೋಟೆಕ್ ಕಂಪನಿಯು ಈ ಲಸಿಕೆಯ ಕ್ಲಿನಿಕಲ್ ಟ್ರಯಲ್ ಪೂರ್ಣಗೊಳಿಸಿದೆ. 4 ಸಾವಿರದಷ್ಟು ಸ್ವಯಂ ಸೇವಕರು ಈ ಟ್ರಯಲ್‌ನ ಭಾಗವಾಗಿದ್ದರು. ಈ ಲಸಿಕೆಯಿಂದ ಯಾವುದೇ ಅಡ್ಡಪರಿಣಾಮಗಳು ಈ ವರೆಗ ಕಂಡು ಬಂದಿಲ್ಲ ಎಂದೂ ಅವರು ತಿಳಿಸಿದ್ದಾರೆ.