ಕಾಸರಗೋಡು: ಕೈಗಾರಿಕೆ ಮತ್ತು ವಾಣಿಜ್ಯ ಇಲಾಖೆಯ ಚಟ್ಟಂಚಾಲ್ ಇಂಡಸ್ಟ್ರಿಯಲ್ ಎಸ್ಟೇಟ್‍ಗೆ ಸುತ್ತು ಆವರಣಗೋಡೆ ನಿರ್ಮಾಣಕಾರ್ಯಕ್ಕೆ ಶಾಸಕ ಸಿ.ಎಚ್.ಕುಞಂಬು ಚಾಲನೆ ನೀಡಿದರು. ಜಿಲ್ಲಾ ಪಂಚಾಯಿತಿ ಅಧ್ಯಕ್ಷೆ ಬೇಬಿ ಬಾಲಕೃಷ್ಣನ್ ಅಧ್ಯಕ್ಷತೆ ವಹಿಸಿದ್ದರು. ಕಾಸರಗೋಡು ಅಭಿವೃದ್ಧಿ ಪ್ಯಾಕೇಜ್‍ನಲ್ಲಿ ಒಳಪಡಿಸುವ ಮೂಲಕ 2 ಕೋಟಿ 90 ಲಕ್ಷ ರೂಪಾಯಿ ವೆಚ್ಚದಲ್ಲಿ ಆವರಣಗೋಡೆ ನಿರ್ಮಿಸಲಾಗುತ್ತಿದೆ. ಕಾಸರಗೋಡು ಅಭಿವೃದ್ಧಿ ಪ್ಯಾಕೇಜ್ ವಿಶೇಷಾಧಿಕಾರಿ ಇ.ಪಿ.ರಾಜಮೋಹನ್, ಜಿಲ್ಲಾ ಪಂಚಾಯಿತಿ ಉಪಾಧ್ಯಕ್ಷ ಶಾನವಾಜ್ ಪಾದೂರು, ಚೆಮ್ಮನಾಡು ಪಂಚಾಯಿತಿ ಅಧ್ಯಕ್ಷೆ ಸುಫೈಜಾ ಅಬೂಬಕರ್, ಹಾರ್ಬರ್ ಇಂಜಿನಿಯರಿಂಗ್ ಕಾಸರಗೋಡು ವಿಭಾಗದ ಕಾರ್ಯನಿರ್ವಾಹಕ ಇಂಜಿನಿಯರ್ ಎ.ಮುಹಮ್ಮದ್ ಅಶ್ರಫ್, ಚಟ್ಟಂಚಾಲ್ ಇಂಡಸ್ಟ್ರಿಯಲ್ ಎಸ್ಟೇಟ್ ಅಭಿವೃದ್ಧಿ ಸಂಘದ ಕಾರ್ಯದರ್ಶಿ ವಿ. ತ್ಯಾಂಪನ್, ಚೆಮ್ನಾಡ್ ಗ್ರಾಮ ಪಂಚಾಯಿತಿ ಸದಸ್ಯ ಟಿ.ಪಿ.ನಿಸಾರ್ ಉಪಸ್ಥಿತರಿದ್ದರು. ಜಿಲ್ಲಾ ಕೈಗಾರಿಕಾ ಕೇಂದ್ರದ ಪ್ರಧಾನ ವ್ಯವಸ್ಥಾಪಕ ಕೆ.ಸಜಿತ್ ಕುಮಾರ್ ಸ್ವಾಗತಿಸಿದರು. ಜಿಲ್ಲಾ ಕೈಗಾರಿಕೆ ಕೇಂದ್ರದ ಸಹಾಯಕ ನಿರ್ದೇಶಕ ಕೆ.ಪಿ.ಸಜೀರ್ ವಂದಿಸಿದರು.
(ಆವರಣಗೋಡೆ ನಿರ್ಮಾಣ ಕಾರ್ಯದ ಶಿಲಾನ್ಯಾಸಫಲಕವನ್ನು ಶಾಸಕ ಸಿ.ಎಚ್.ಕುಞಂಬು ಅನಾವರಣಗೊಳಿಸಿದರು.)