ಪುಣೆ: ಇತರ ಕರೆನ್ಸಿಗಳಿಗೆ ಹೋಲಿಸಿದರೆ ಅಮೆರಿಕಾ ಡಾಲರ್ ಎದುರು ರೂಪಾಯಿ ಹೆಚ್ಚು ಪ್ರಬಲವಾಗಿದೆ ಎಂದು ವಿತ್ತ ಸಚಿವೆ ನಿರ್ಮಲಾ ಸೀತಾರಾಮನ್ ಹೇಳಿದ್ದಾರೆ.
ಡಾಲರ್ ಎದುರು ರೂಪಾಯಿ ಸಾರ್ವಕಾಲಿಕ ದಾಖಲೆಯ ಕುಸಿತಕ್ಕೆ ಸಂಬಂಧಿಸಿದ ಪ್ರಶ್ನೆಗೆ ಉತ್ತರಿಸಿದ ಸಚಿವರು, ಆರ್‌ಬಿಐ ಮತ್ತು ಹಣಕಾಸು ಸಚಿವಾಲಯವು ಪರಿಸ್ಥಿತಿಯನ್ನು ಸೂಕ್ಷ್ಮವಾಗಿ ಗಮನಿಸುತ್ತಿದೆ ಎಂದು ಹೇಳಿದರು.
ಪುಣೆ ಜಿಲ್ಲೆಗೆ ತಮ್ಮ ಮೂರು ದಿನಗಳ ಭೇಟಿಯ ಕೊನೆಯ ದಿನದಂದು ಮಾಧ್ಯಮಗಳೊಂದಿಗೆ ಮಾತನಾಡಿದ ಹಣಕಾಸು ಸಚಿವರು, ಇತರ ಕರೆನ್ಸಿಗಳಿಗೆ ಹೋಲಿಸಿದರೆ ಸ್ಥಿರತೆ ಕಾಯ್ದುಕೊಳ್ಳುವ ಸಾಮರ್ಥ್ಯವಿರುವ ಒಂದು ಕರೆನ್ಸಿ ಇದ್ದರೆ, ಅದು ಭಾರತೀಯ ರೂಪಾಯಿ ಮಾತ್ರ. ನಾವು ಪರಿಸ್ಥಿತಿಯನ್ನು ಚೆನ್ನಾಗಿ ನಿಭಾಯಿಸಿದ್ದೇವೆ ಎಂದರು.