HEALTH TIPS

ರಕ್ತದಾನ ಅಮೃತ ಮಹೋತ್ಸವಕ್ಕೆ ನೋಂದಣಿ ಆರಂಭ

 

             ನವದೆಹಲಿ: 'ರಕ್ತದಾನ ಅಮೃತ ಮಹೋತ್ಸವ' ಅಭಿಯಾನಕ್ಕಾಗಿ ನೋಂದಣಿ ಪ್ರಕ್ರಿಯೆ ಆರಂಭಗೊಂಡಿದ್ದು, ಆರೋಗ್ಯ ಸೇತು ಆಯಪ್‌ ಮೂಲಕ ಜನರು ತಮ್ಮ ಹೆಸರು ನೋಂದಾಯಿಸಿಕೊಳ್ಳಬಹುದು ಎಂದು ಕೇಂದ್ರ ಆರೋಗ್ಯ ಸಚಿವಾಲಯ ಹೇಳಿದೆ.

               ಸೆಪ್ಟೆಂಬರ್‌ 17ಕ್ಕೆ ಒಂದು ಲಕ್ಷ ಯುನಿಟ್‌ ರಕ್ತವನ್ನು ಸಂಗ್ರಹಿಸುವ ದೊಡ್ಡ ಮಟ್ಟದ ಸ್ವಯಂ ಪ್ರೇರಿತ ರಕ್ತದಾನ ಶಿಬಿರ ಅಂಗವಾಗಿ ಈ ಅಭಿಯಾನ ಕೈಗೊಳ್ಳಲಾಗಿದೆ.

ಅಂದು ಪ್ರಧಾನಿ ನರೇಂದ್ರ ಮೋದಿ ಅವರ ಹುಟ್ಟುಹಬ್ಬದ ದಿನವೂ ಆಗಿದೆ.

              ಕೇಂದ್ರ ಆರೋಗ್ಯ ಸಚಿವಾಲಯವು ಈ ಸಂಬಂಧ ಎಲ್ಲಾ ರಾಜ್ಯ ಹಾಗೂ ಕೇಂದ್ರಾಡಳಿತ ಪ್ರದೇಶಗಳಿಗೆ ಮಂಗಳವಾರ ಪತ್ರ ಬರೆದಿದೆ. ಈ ಅಭಿಯಾನವು ರಾಷ್ಟ್ರೀಯ ಸ್ವಯಂ ಪ್ರೇರಿತ ರಕ್ತದಾನ ದಿನ (ಅ.1) ವರೆಗೆ ಮುಂದುವರೆಯಲಿದೆ. ರಾಜ್ಯ ಮತ್ತು ಕೇಂದ್ರಾಡಳಿತ ಪ್ರದೇಶಗಳಲ್ಲಿ ಅಲ್ಲಿನ ಸ್ಥಳೀಯ ಭಾಷೆಗಳಲ್ಲಿ ಅಭಿಯಾನದ ಕುರಿತು ಜಾಗೃತಿ ಮೂಡಿಸಬೇಕು ಎಂದೂ ಸಚಿವಾಲಯ ಹೇಳಿದೆ.


ಕಾಮೆಂಟ್‌‌ ಪೋಸ್ಟ್‌ ಮಾಡಿ

0 ಕಾಮೆಂಟ್‌ಗಳು
* Please Don't Spam Here. All the Comments are Reviewed by Admin.

Top Post Ad

Click to join Samarasasudhi Official Whatsapp Group

Qries

Qries

Below Post Ad


ಜಾಹಿರಾತು














Qries