ನವದೆಹಲಿ: ಮಾನ್ಯತೆ ಪಡೆದ ಸಂಸ್ಥೆಗಳಿಂದ ದೂರಶಿಕ್ಷಣ ಮತ್ತು ಆನ್‌ಲೈನ್ ಕಲಿಕೆಯ ಮೂಲಕ ಪಡೆದ ಪದವಿಗಳನ್ನು ಸಾಂಪ್ರದಾಯಿಕ ಕ್ರಮದಲ್ಲಿ ಪಡೆದ ಪದವಿಗಳಿಗೆ ಸಮಾನವಾಗಿ ಪರಿಗಣಿಸಲಾಗುವುದು ಎಂದು ವಿಶ್ವವಿದ್ಯಾಲಯ ಧನ ಸಹಾಯ ಆಯೋಗದ(ಯುಜಿಸಿ) ಕಾರ್ಯದರ್ಶಿ ರಜನೀಶ್ ಜೈನ್ ಹೇಳಿದ್ದಾರೆ.
ಉನ್ನತ ಶಿಕ್ಷಣ ಸಂಸ್ಥೆಗಳು ಮುಕ್ತ, ದೂರಶಿಕ್ಷಣ ಅಥವಾ ಆನ್‌ಲೈನ್ ಮೂಲಕ ನೀಡುವ ಸ್ನಾತಕೋತ್ತರ ಡಿಪ್ಲೊಮಾಗಳು ಸಾಂಪ್ರದಾಯಿಕ ಕ್ರಮದಲ್ಲಿ ನೀಡುವ ಪದವಿ, ಸ್ನಾತಕೋತ್ತರ ಡಿಪ್ಲೊಮಾಗಳಿಗೆ ಸಮಾನವಾಗಿರುತ್ತದೆ ಎಂದಿದ್ದಾರೆ.
ಯುಜಿಸಿಯ (ಮುಕ್ತ ಮತ್ತು ದೂರಶಿಕ್ಷಣ ಮತ್ತು ಆನ್‌ಲೈನ್ ಕಾರ್ಯಕ್ರಮಗಳು) ನಿಯಮಾವಳಿ 22ರ ಪ್ರಕಾರ ಈ ನಿರ್ಧಾರ ತೆಗೆದುಕೊಳ್ಳಲಾಗಿದೆ ಎಂದು ಹೇಳಿದ್ದಾರೆ.