ಅಹಮದಾಬಾದ್: '2014ರ ಮೊದಲು ಕಾಂಗ್ರೆಸ್ ಅಧಿಕಾರದಲ್ಲಿದ್ದಾಗ ಆ ಪಕ್ಷದ ನಾಯಕರು ಆರೋಗ್ಯ ಕ್ಷೇತ್ರದ ಮೂಲಸೌಕರ್ಯಗಳನ್ನು ಅಭಿವೃದ್ಧಿಪಡಿಸುವ ಬದಲು ಅದರ ಹೆಸರಿನಲ್ಲಿ ಹಣ ಸಂಪಾದಿಸಿದ್ದಾರೆ' ಎಂದು ಕೇಂದ್ರ ಗೃಹಸಚಿವ ಅಮಿತ್ ಶಾ ಅವರು ಮಂಗಳವಾರ ಆರೋಪಿಸಿದ್ದಾರೆ.
ಗಾಂಧಿನಗರ ಜಲ್ಲೆಯ ಕಲೋಲ್ ಪಟ್ಟಣದಲ್ಲಿ ಹಮ್ಮಿಕೊಂಡಿದ್ದ ಕಾರ್ಯಕ್ರಮವೊಂದರಲ್ಲಿ ಮಾತನಾಡಿದ ಅವರು, 'ನರೇಂದ್ರ ಮೋದಿ ಅವರು ಪ್ರಧಾನಿಯಾದ ಬಳಿಕ ಆರೋಗ್ಯ ಕ್ಷೇತ್ರದ ಚಿತ್ರಣವೇ ಬದಲಾಗಿದೆ. ಆಯುಷ್ಮಾನ್ ಭಾರತ- ಪ್ರಧಾನ ಮಂತ್ರಿ ಜನ ಆರೋಗ್ಯ ಯೋಜನೆಗಳ ಅಡಿಯಲ್ಲಿ 60 ಕೋಟಿ ಬಡವರು ₹5 ಲಕ್ಷದವರೆಗೆ ಉಚಿತವಾಗಿ ಚಿಕಿತ್ಸೆ ಪಡೆಯುತ್ತಿದ್ದಾರೆ' ಎಂದೂ ಹೇಳಿದ್ದಾರೆ.
'ಈ ಯೋಜನೆಗಳ ಅನುಷ್ಠಾನಕ್ಕಾಗಿ ನರೇಂದ್ರ ಮೋದಿ ಅವರು ₹64 ಸಾವಿರ ಕೋಟಿ ಅನುದಾನ ಮಂಜೂರು ಮಾಡಿದ್ದಾರೆ' ಎಂದೂ ತಿಳಿಸಿದ್ದಾರೆ.