ನವದೆಹಲಿ: ಕಾಂಗ್ರೆಸ್‌ನ ಹಿರಿಯ ನಾಯಕ ಶಶಿ ತರೂರ್ ಅವರು ರಾಜಸ್ಥಾನ ಮುಖ್ಯಮಂತ್ರಿ ಅಶೋಕ್ ಗೆಹಲೋತ್ ಅವರನ್ನು ಭಾನುವಾರ ಭೇಟಿಯಾಗಿ ಪಕ್ಷದ ಅಧ್ಯಕ್ಷೀಯ ಚುನಾವಣೆಯ ಬಗ್ಗೆ ಚರ್ಚೆ ನಡೆಸಿದ್ದಾರೆ ಎಂದು ಮೂಲಗಳು ತಿಳಿಸಿವೆ.
ಮುಂಬರುವ ಚುನಾವಣೆಗಳು ಮತ್ತು ಪಕ್ಷದ ಭವಿಷ್ಯದ ವಿಚಾರವಾಗಿ ಉಭಯ ನಾಯಕರು ಅರ್ಧ ಗಂಟೆಗಳ ಕಾಲ ಚರ್ಚೆ ನಡೆಸಿದ್ದಾರೆ ಎಂದೂ ಹೇಳಿವೆ.