ಕಾಸರಗೋಡು: ಸಮಾಜದ ಸ್ವಾಸ್ಥ್ಯ ಕಾಪಾಡುವಲ್ಲಿ ಹಸಿರು ಕ್ರಿಯಾ ಸೇನೆ ಸದಸ್ಯರ ಪಾತ್ರ ಮಹತ್ತರವಾದುದು ಎಂದು ಶಾಸಕ ಇ.ಚಂದ್ರಶೇಖರನ್ ತಿಳಿಸಿದ್ದಾರೆ. ಅವರು ಹಸಿರು ಕ್ರಿಯಾ ಸೇನೆ ಸದಸ್ಯರ ಜಿಲ್ಲೆಯ ಪರಪ್ಪ ಬ್ಲಾಕ್ ಮಟ್ಟದ ಸಮಾವೇಶ ಉದ್ಘಾಟಿಸಿ ಮಾತನಾಡಿದರು.
ಪರಪ್ಪ ಬ್ಲಾಕ್‍ಅಧ್ಯಕ್ಷೆ ಎಂ.ಲಕ್ಷ್ಮಿ ಅಧ್ಯಕ್ಷತೆ ವಹಿಸಿದ್ದರು. ಸ್ವಚ್ಛತಾ ಮಿಷನ್‍ನ ಕಾರ್ಯನಿರ್ವಾಹಕ ನಿರ್ದೇಶಕ ಕೆ.ಟಿ.ಬಾಲಭಾಸ್ಕರನ್ ಪ್ರಾಸ್ತಾವಿಕವಾಗಿ ಮಾತುಗಳನ್ನಾಡಿದರು. ಈ ಸಂದರ್ಭ ಹಸಿರು ಕ್ರಿಯಾ ಸೇನೆಯ ಎಲ್ಲ ಸದಸ್ಯರಿಗೆ ಸ್ಮರಣಿಕೆ ನೀಡಿ ಗೌರವಿಸಲಾಯಿತು. ನವ ಕೇರಳ ಕ್ರಿಯಾ ಯೋಜನೆಯ ಜಿಲ್ಲಾ ಸಂಯೋಜಕ ಕೆ.ಬಾಲಕೃಷ್ಣನ್, ನೈರ್ಮಲ್ಯ ಮಿಷನ್ ಜಿಲ್ಲಾ ಸಂಯೋಜಕಿ ಎ.ಲಕ್ಷ್ಮಿ, ಪನತ್ತಡಿ ಗ್ರಾಮ ಪಂಚಾಯಿತಿ ಅಧ್ಯಕ್ಷ ಪ್ರಸನ್ನ ಪ್ರಸಾದ್, ಕಲ್ಲಾರ್ ಗ್ರಾಮ ಪಂಚಾಯಿತಿ ಅಧ್ಯಕ್ಷ ಟಿ.ಕೆ.ನಾರಾಯಣನ್, ಕೋಡೋಂಬೇಲೂರು ಗ್ರಾಮ ಪಂಚಾಯಿತಿ ಅಧ್ಯಕ್ಷೆ ಪಿ.ಶ್ರೀಜಾ, ವೆಸ್ಟ್ ಎಳೇರಿ ಗ್ರಾಮ ಪಂಚಾಯಿತಿ ಅಧ್ಯಕ್ಷೆ ಗಿರಿಜಾ ಮೋಹನನ್, ಬ್ಲಾಕ್ ಪಂಚಾಯಿತಿ ಉಪಾಧ್ಯಕ್ಷ ಕೆ.ಭೂಪೇಶ್, ಬ್ಲಾಕ್ ಪಂಚಾಯಿತಿ ಸದಸ್ಯ ಜೋಸ್ ಕುತ್ತಿಯತೊಟ್ಟಿಲ್, ಸ್ಥಾಯಿ ಸಮಿತಿ ಅಧ್ಯಕ್ಷರಾದ ಪಿ.ವಿ.ಚಂದ್ರನ್, ರಜಿನಿ ಕೃಷ್ಣನ್, ಬ್ಲಾಕ್ ಸದಸ್ಯೆ ಪದ್ಮಕುಮಾರಿ ಉಪಸ್ಥಿತರಿದ್ದರು. ಬ್ಲಾಕ್ ಪಂಚಾಯಿತಿ ಕಾರ್ಯದರ್ಶಿ ಪಿ.ಕೆ.ಸುಮೇಶ್ ಕುಮಾರ್ ಸ್ವಾಗತಿಸಿದರು. ಜಿ.ಇ.ಒ ಬಿಜುಕುಮಾರ್ ವಂದಿಸಿದರು.
ಪರಪ್ಪ ಬ್ಲಾಕ್ ಪಂಚಾಯಿತಿ ವ್ಯಾಪ್ತಿಯ ಏಳು ಗ್ರಾ.ಪಂ.ಗಳಹಸಿರು ಕರ್ಮ ಸೇನೆ ಒಕ್ಕೂಟದ ಅಧ್ಯಕ್ಷರು ಹಾಗೂ ಕಾರ್ಯದರ್ಶಿಗಳು ತಾವು ಎದುರಿಸುತ್ತಿರುವ ಸಮಸ್ಯೆ ಹಾಗೂ ತಂಡ ನಡೆಸಿರುವ ಸಾಧನೆಗಳ ಬಗ್ಗೆ ಮಾಃಇತಿ ನೀಡಿದರು. ಸಮಾರಂಭಕ್ಕೆ ಮೊದಲು ಆಕರ್ಷಕ ಮೆರವಣಿಗೆ ನಡೆಯಿತು. ಈ ಸಂದರ್ಭ ಪ್ಲಾಸ್ಟಿಕ್‍ಗೆ ಪರ್ಯಾಯ ಉತ್ಪನ್ನಗಳ ಪ್ರದರ್ಶನ ಹಾಗೂ ಕಲಾ ಕಾರ್ಯಕ್ರಮಗಳು ನಡೆಯಿತು.
(ಪರಪ್ಪ ಬ್ಲಾಕ್ ಪಂಚಾಯಿತಿ ಹಸಿರು ಕ್ರಿಯಾ ಸೇನಾ ಸಂಗಮದಲ್ಲಿ ಪ್ಲಾಸ್ಟಿಕ್ ಬದಲಿ ಉತ್ಪನ್ನಗಳ ಪ್ರದರ್ಶನ ಮತ್ತು ಮಾರಾಟ ನಡೆಯಿತು.)