ಮುಂಬೈ: ರಸ್ತೆ ಅಪಘಾತದಲ್ಲಿ ಟಾಟಾ ಸನ್ಸ್ ಮಾಜಿ ಅಧ್ಯಕ್ಷ ಸೈರಸ್ ಮಿಸ್ತ್ರಿ ಸಾವು ಪ್ರಕರಣಕ್ಕೆ ಸಂಬಂಧಿಸಿದಂತೆ ಮಹಾರಾಷ್ಟ್ರದ ಉಪಮುಖ್ಯಮಂತ್ರಿ ದೇವೇಂದ್ರ ಫಡಣವೀಸ್ ತನಿಖೆಗೆ ಆದೇಶಿಸಿದ್ದಾರೆ.
ಭಾನುವಾರ ಅಹಮದಾಬಾದ್‌ನಿಂದ ಮುಂಬೈಗೆ ಮರ್ಸಿಡಿಸ್ ಬೆಂಜ್ ಕಾರಿನಲ್ಲಿ ಸಂಚುರಿಸುತ್ತಿದ್ದಾಗ ಮಹಾರಾಷ್ಟ್ರದ ಪಾಲ್ಘರ್ ಜಿಲ್ಲೆಯ ಬಳಿ ರಸ್ತೆ ವಿಭಜಕಕ್ಕೆ ಕಾರು ಡಿಕ್ಕಿ ಅಪಘಾತ ಸಂಭವಿಸಿತ್ತು.
ಸೈರಸ್ ಮಿಸ್ತ್ರಿ ನಿಧನಕ್ಕೆ ಸಂತಾಪ ಸೂಚಿಸಿರುವ ದೇವೇಂದ್ರ ಫಡಣವೀಸ್, ಡಿಜಿಪಿ ಜೊತೆ ಮಾತನಾಡಿ ವಿವರವಾದ ತನಿಖೆಗೆ ಆದೇಶಿಸಿದ್ದಾರೆ.
ಪಾಲ್ಘರ್ ಜಿಲ್ಲೆಯಲ್ಲಿ ಸೂರ್ಯ ನದಿಯ ಸೇತುವೆ ಮೇಲೆ 3.15ರ ಸುಮಾರಿಗೆ ರಸ್ತೆ ವಿಭಜಕಕ್ಕೆ ಕಾರು ಡಿಕ್ಕಿಯಾಗಿ ಅಪಘಾತ ಸಂಭವಿಸಿತ್ತು.