ನವದೆಹಲಿ: ಎಂಟು ಮಂದಿ ಸಾವಿಗೀಡಾಗಿದ್ದ ಲಖಿಂಪುರ ಖೇರಿ ಹಿಂಸಾಚಾರಕ್ಕೆ ಸಂಬಂಧಿಸಿದ ಪ್ರಕರಣದಲ್ಲಿ ಕೇಂದ್ರ ಸಚಿವ ಅಜಯ್ ಮಿಶ್ರಾ ಅವರ ಮಗ ಆಶಿಶ್ ಮಿಶ್ರಾ ಅವರು ಜಾಮೀನು ಅರ್ಜಿ ಸಲ್ಲಿಸಿದ್ದು, ಈ ಸಂಬಂಧ ಪ್ರತಿಕ್ರಿಯೆ ನೀಡುವಂತೆ ಉತ್ತರ ಪ್ರದೇಶ ಸರ್ಕಾರಕ್ಕೆ ಸುಪ್ರೀಂ ಕೋರ್ಟ್ ಮಂಗಳವಾರ ಸೂಚಿಸಿದೆ.
ಅಲಹಾಬಾದ್ ಹೈಕೋರ್ಟ್‌ನ ಲಖನೌ ಪೀಠವು ಜುಲೈ 26 ರಂದು ಆಶಿಶ್ ಅವರ ಜಾಮೀನು ಅರ್ಜಿಯನ್ನು ತಿರಸ್ಕರಿಸಿತ್ತು.
ಹೈಕೋರ್ಟ್ ಆದೇಶವನ್ನು ಪ್ರಶ್ನಿಸಿ ಆಶಿಶ್ ಸಲ್ಲಿಸಿರುವ ಅರ್ಜಿಯ ವಿಚಾರಣೆಯನ್ನು ನ್ಯಾಯಮೂರ್ತಿಗಳಾದ ಇಂದಿರಾ ಬ್ಯಾನರ್ಜಿ ಮತ್ತು ಎಂ.ಎಂ. ಸುಂದ್ರೇಶ್ ಅವರ ಪೀಠ ನಡೆಸಿತು.
'ನಾವು ಉತ್ತರ ಪ್ರದೇಶ ಸರ್ಕಾರಕ್ಕೆ ನೋಟಿಸ್ ನೀಡುತ್ತಿದ್ದೇವೆ' ಎಂದು ಹೇಳಿದ್ದು, ಸೆಪ್ಟೆಂಬರ್ 26ಕ್ಕೆ ವಿಚಾರಣೆ ಮುಂದೂಡಿತು.