ತಿರುವನಂತಪುರ: ರಾಜ್ಯಪಾಲ ಆರಿಫ್ ಮೊಹಮ್ಮದ್ ಖಾನ್ ವಿರುದ್ಧ ಎಲ್‍ಡಿಎಫ್ ಅಭಿಯಾನ ಆರಂಭಿಸಿದೆ. ರಾಜ್ಯಪಾಲರ ವಿರುದ್ಧ ರಾಷ್ಟ್ರಪತಿ ದ್ರೌಪದಿ ಮುರ್ಮು ಅವರಿಗೆ ಸಿಪಿಐ ಮುಖಂಡ, ಸಂಸದ ಬಿನೋಯ್ ವಿಶ್ವಂ ಪತ್ರ ಬರೆದಿದ್ದಾರೆ. ರಾಜ್ಯಪಾಲರು ಸರ್ಕಾರದ ವಿರುದ್ಧದ ಬಹಿರಂಗ ಸಮರ ಸಂವಿಧಾನಕ್ಕೆ ವಿರುದ್ಧವಾಗಿದ್ದು, ರಾಜಭವನದ ಸಮಗ್ರತೆ ಕಾಪಾಡಲು ಸೂಚನೆ ನೀಡಬೇಕು ಎಂದು ಪತ್ರದಲ್ಲಿ ಬಿನೊಯ್ ವಿಶ್ವಂ ಆಗ್ರಹಿಸಿದ್ದಾರೆ.
ಪರಿಸ್ಥಿತಿಯ ಗಂಭೀರತೆಯನ್ನು ಪರಿಗಣಿಸಿ ರಾಷ್ಟ್ರಪತಿಗಳು ಮಧ್ಯಪ್ರವೇಶಿಸಬೇಕು. ರಾಜ್ಯ ಸರ್ಕಾರದ ಕೆಲಸದಲ್ಲಿ ರಾಜ್ಯಪಾಲರು ಮಧ್ಯಪ್ರವೇಶಿಸುವುದನ್ನು ತಡೆಯಬೇಕು ಎಂದು ಪತ್ರದಲ್ಲಿ ಬಿನೊಯ್ ವಿಶ್ವಂ ಆಗ್ರಹಿಸಿದ್ದಾರೆ. ರಾಜಭವನವನ್ನು ಆರೆಸ್ಸೆಸ್ ಶಿಬಿರವನ್ನಾಗಿ ಮಾಡಲು ರಾಜ್ಯಪಾಲರು ಪ್ರಯತ್ನಿಸುತ್ತಿದ್ದಾರೆ ಎಂದು ಪತ್ರದಲ್ಲಿ ಟೀಕಿಸಲಾಗಿದೆ.
ಸಿಪಿಎಂ ರಾಜ್ಯ ಕಾರ್ಯದರ್ಶಿ ಎಂ.ವಿ.ಗೋವಿಂದನ್ ಕೂಡ ರಾಜ್ಯಪಾಲರ ವಿರುದ್ದ ಕಿಡಿಕಾರಿದ್ದಾರೆ. ರಾಜ್ಯಪಾಲರಿಗೆ ಮಾನಸಿಕ ಸಮಸ್ಯೆ ಇದೆ ಎಂದು ಭಾವಿಸುವುದರಲ್ಲಿ ತಪ್ಪಿಲ್ಲ ಎಂದು ಮಾಜಿ ಸಚಿವರು ಟೀಕಿಸಿದ್ದಾರೆ.
ರಾಜ್ಯದ ಆಡಳಿತದಲ್ಲಿ ಹಸ್ತಕ್ಷೇಪ ಮಾಡಬೇಡ: ಸಂಸದ ಬಿನೋಯ್ ವಿಶ್ವಂರಿಂದ ರಾಜ್ಯಪಾಲರ ವಿರುದ್ಧ ರಾಷ್ಟ್ರಪತಿಗಳಿಗೆ ಪತ್ರ
0
ಸೆಪ್ಟೆಂಬರ್ 20, 2022