ನವದೆಹಲಿ: ನೋಂದಾಯಿತ ಶೈಕ್ಷಣಿಕ ಸಂಸ್ಥೆಗಳಲ್ಲಿ ಶಿಕ್ಷಕರು ಮತ್ತು ವಿದ್ಯಾರ್ಥಿಗಳಿಗೆ ವಸ್ತ್ರಸಂಹಿತೆ ಜಾರಿಗೊಳಿಸುವಂತೆ ಕೇಂದ್ರ ಮತ್ತು ರಾಜ್ಯ ಸರ್ಕಾರಗಳಿಗೆ ಸೂಚನೆ ನೀಡಲು ಕೋರಿದ್ದ ಅರ್ಜಿ ವಿಚಾರಣೆಗೆ ಸುಪ್ರೀಂ ಕೋರ್ಟ್ ಶುಕ್ರವಾರ ನಿರಾಕರಿಸಿದೆ.
ನ್ಯಾಯಮೂರ್ತಿಗಳಾದ ಹೇಮಂತ್ ಗುಪ್ತಾ ಮತ್ತು ಸುಧಾಂಶು ಧುಲಿಯಾ ಅವರಿದ್ದ ನ್ಯಾಯಪೀಠವು, 'ಇದು ನ್ಯಾಯಾಲಯ ತೀರ್ಪು ನೀಡುವಂಥ ವಿಚಾರವಲ್ಲ' ಎಂದು ತಿಳಿಸಿದೆ.
ಸಮಾನತೆ, ಬ್ರಾತೃತ್ವ ಮತ್ತು ಭಾವೈಕ್ಯತೆ ಮೂಡಿಸಲು ವಸ್ತ್ರಸಂಹಿತೆ ಜಾರಿ ಮಾಡಬೇಕು ಎಂದು ಸಾರ್ವಜನಿಕ ಹಿತಾಸಕ್ತಿ ಅರ್ಜಿ ಸಲ್ಲಿಸಲಾಗಿತ್ತು. ಕರ್ನಾಟಕದಲ್ಲಿ 'ಹಿಜಾಬ್' ವಿವಾದ ಆರಂಭವಾದ ನಂತರ ಈ ಅರ್ಜಿ ಸಲ್ಲಿಸಲಾಗಿತ್ತು.