ನವದೆಹಲಿ:
ಮಾಜಿ ರಾಷ್ಟ್ರಪತಿ ರಾಮನಾಥ ಕೋವಿಂದ್ ಅವರಿಗೆ ಕೇಂದ್ರ ಸರ್ಕಾರ 'ಝಡ್ ಪ್ಲಸ್'
ಶ್ರೇಣಿಯ ವಿಐಪಿ ಭದ್ರತೆಯನ್ನು ಒದಗಿಸಿದೆ ಎಂದು ಅಧಿಕಾರಿಗಳು ಬುಧವಾರ ತಿಳಿಸಿದ್ದಾರೆ.
ಕೋವಿಂದ್ ಅವರು ಪ್ರಯಾಣಿಸುವ ವೇಳೆ ಶಸ್ತ್ರ ಸಜ್ಜಿತ ಬೆಂಗಾವಲು ಪಡೆ ಹಾಗೂ ಕೇಂದ್ರೀಯ ಮೀಸಲು ಪೊಲೀಸ್ ಪಡೆ (ಸಿಆರ್ಪಿಎಫ್) ಭದ್ರತೆ ಒದಗಿಸಲಿದೆ.
ಕೇಂದ್ರೀಯ ಗುಪ್ತಚರ ಇಲಾಖೆ ಸಲಹೆಯ ಮೇರೆಗೆ ಕೇಂದ್ರ ಗೃಹ ಸಚಿವಾಲಯ ಝಡ್ ಪ್ಲಸ್
ಶ್ರೇಣಿಯ ಭದ್ರತೆಗೆ ಅನುಮೋದನೆ ನೀಡಿದೆ. ಸೆಪ್ಟೆಂಬರ್ 5ರಿಂದಲೇ ಯೋಧರು ಕೋವಿಂದ್ ಅವರ
ಭದ್ರತೆಯ ಜವಾಬ್ದಾರಿ ವಹಿಸಿಕೊಂಡಿದ್ದಾರೆ ಎಂದು ಅವರು ತಿಳಿಸಿದ್ದಾರೆ.
ಕೇಂದ್ರ ದೆಹಲಿಯ ಜನಪಥ್ ರಸ್ತೆಯಲ್ಲಿರುವ ಕೋವಿಂದ್ ಅವರ ನಿವಾಸಕ್ಕೂ ಭದ್ರತೆ ಒದಗಿಸಲಾಗುತ್ತದೆ.