ಪೆರ್ಲ: ಬಿಜೆಪಿ ಕುಂಬಳೆ ಮಂಡಲ ಸಮಿತಿ, ಅಸ್ತಿತ್ವ ಪ್ರತಿಷ್ಠಾನ ಟ್ರಸ್ಟ್ ಹಾಗೂ ಕಸ್ತೂರ್‍ಬಾ ವೈದ್ಯಕೀಯ ಕಾಲೇಜು ಆಸ್ಪತ್ರೆ ಸಹಯೋಗದಲ್ಲಿ ಪ್ರಧಾನಿ ನರೇಂದ್ರ ಮೋದಿಯವರ ಜನ್ಮದಿನದ ಅಂಗವಾಗಿ ನಡೆಯುತ್ತಿರುವ ಸೇವಾ ಚಟುವಟಿಕೆಗಳ ಅಂಗವಾಗಿ ಅಕ್ಟೋಬರ್ 2 ರಂದು ಗಾಂಧಿ ಜಯಂತಿಯಂದು ಮೆಗಾ ವೈದ್ಯಕೀಯ ಶಿಬಿರ ಬೆಳಗ್ಗೆ 9.30ಕ್ಕೆ ಪೆರ್ಲ ಶಂಕರ ಸದನದಲ್ಲಿ ಜರುಗಲಿದೆ. ವೈದ್ಯಕೀಯ ಶಿಬಿರವನ್ನು ಬಿಜೆಪಿ ಜಿಲ್ಲಾಧ್ಯಕ್ಷ ರವೀಶ ತಂತ್ರಿ ಕುಂಟಾರು ಉದ್ಘಾಟಿಸುವರು.
ಶಿಬಿರ ಮಧ್ಯಾಹ್ನ 2ರವರೆಗೆ ನಡೆಯಲಿದ್ದು, ಶಿಬಿರದಲ್ಲಿ ಕಸ್ತೂರಬಾ ವೈದ್ಯಕೀಯ ಕಾಲೇಜಿನ ಹತ್ತಕ್ಕೂ ಹೆಚ್ಚು ಮಂದಿ ತಜ್ಞ ವೈದ್ಯರ ಸೇವೆ ಲಭ್ಯವಿರುವುದಾಗಿ ಪ್ರಕಟಣೆ ತಿಳಿಸಿದೆ.
ನಾಳೆ ಪೆರ್ಲದಲ್ಲಿ ಮೆಗಾ ವೈದ್ಯಕೀಯ ಶಿಬಿರ
0
ಸೆಪ್ಟೆಂಬರ್ 30, 2022