ಲಂಡನ್: ಬ್ರಿಟಿಷ್ ಪ್ರಧಾನಿ ಹುದ್ದೆಗಾಗಿ ನಡೆದ ಚುನಾವಣೆಯಲ್ಲಿ ಭಾರತ ಮೂಲದ ರಿಷಿ ಸುನಕ್ ಗೆ ಸೋಲು ಎದುರಾಗಿದ್ದು, ಕನ್ಸರ್ವೇಟಿವ್ ಪಕ್ಷದ ನಾಯಕತ್ವದ ಸ್ಪರ್ಧೆಯಲ್ಲಿ ಯುಕೆ ವಿದೇಶಾಂಗ ಕಾರ್ಯದರ್ಶಿ ಲಿಜ್ ಟ್ರಸ್ ಜಯಭೇರಿ ಭಾರಿಸಿದ್ದಾರೆ.
ಯುಕೆ ವಿದೇಶಾಂಗ ಕಾರ್ಯದರ್ಶಿ ಲಿಜ್ ಟ್ರಸ್ ಅವರು ಹೊಸ ಬ್ರಿಟಿಷ್ ಪ್ರಧಾನಿಯಾಗಲು ಕನ್ಸರ್ವೇಟಿವ್ ಪಕ್ಷದ ನಾಯಕತ್ವದ ಸ್ಪರ್ಧೆಯಲ್ಲಿ ಭಾರತೀಯ ಮೂಲದ ಮಾಜಿ ಚಾನ್ಸೆಲರ್ ರಿಷಿ ಸುನಕ್ ಅವರನ್ನು ಸೋಲಿಸಿದ್ದಾರೆ ಎಂದು ಪಕ್ಷವು ಸೋಮವಾರ ಘೋಷಿಸಿತು.
ಆ ಮೂಲಕ ಕಳೆದೊಂದು ತಿಂಗಳಿನಿಂದ ಬ್ರಿಟನ್ ನಲ್ಲಿ ನಡೆದ ಪೊಲಿಟಿಕಲ್ ಹೈ ಡ್ರಾಮಾಗೆ ಕೊನೆಗೂ ತೆರೆ ಬಿದ್ದಂತಾಗಿದೆ. ಸರ್ ಗ್ರಹಾಂ ಬ್ರಾಡಿ -- 1922 ರ ಬ್ಯಾಕ್‌ಬೆಂಚ್ ಟೋರಿ ಸಂಸದರ ಸಮಿತಿಯ ಅಧ್ಯಕ್ಷರು ಮತ್ತು ನಾಯಕತ್ವದ ಚುನಾವಣೆಯ ರಿಟರ್ನಿಂಗ್ ಆಫೀಸರ್ -- 10 ಡೌನಿಂಗ್ ಸ್ಟ್ರೀಟ್‌ನಲ್ಲಿ ಉನ್ನತ ಹುದ್ದೆಗಾಗಿ ನಡೆದ ಸ್ಪರ್ಧೆಯಲ್ಲಿ 47 ವರ್ಷ ವಯಸ್ಸಿನ ಟ್ರಸ್ ವಿಜೇತರೆಂದು ಘೋಷಿಸಲಾಗಿದೆ.
ಪ್ರಮುಖವಾಗಿ ಇನ್ಫೋಸಿಸ್ ನಾರಾಯಣಮೂರ್ತಿ ಅಳಿಯ ರಿಷಿ ಸುನಕ್ ಹಾಗೂ ಲಿಜ್ ಟ್ರಸ್ ನಡುವೆ ತೀವ್ರ ಸ್ಪರ್ಧೆ ಎರ್ಪಟ್ಟಿತ್ತು. ಅಂತಿಮವಾಗಿ ಲಿಜ್ ಟ್ರಸ್ ಅತೀ ಹೆಚ್ಚಿನ ಮತಗಳ ಮೂಲಕ ಕನ್ಸರ್ವೇಟೀವ್ ಪಾಕ್ಟಿ ನಾಯಕಿಯಾಗಿ ಆಯ್ಕೆಯಾಗಿದ್ದಾರೆ. ಇದೀಗ ಲಿಜ್ ಟ್ರಸ್ ಬ್ರಿಟನ್ ಪ್ರಧಾನಿಯಾಗಿ ಅಧಿಕಾರ ಸ್ವೀಕರಿಸಲಿದ್ದಾರೆ.
ಬ್ರಿಟನ್ ಪ್ರಧಾನಿ ಯಾರಾಗಬೇಕು ಎಂದು ಕಳೆದ ಒಂದು ತಿಂಗಳಿನಿಂದ ಮತದಾನ ಪ್ರಕ್ರಿಯೆ ನಡೆದಿತ್ತು. ಇದರಲ್ಲಿ ಲಿಜ್ ಟ್ರಸ್ 82 ಸಾವಿರಕ್ಕೂ ಹೆಚ್ಚು ಮತಗಳನ್ನು ಪಡೆದಿದ್ದರೆ, ರಿಷಿ ಸುನಕ್ 62 ಸಾವಿರಕ್ಕೂ ಹೆಚ್ಚು ಮತಗಳನ್ನು ಪಡೆದಿದ್ದಾರೆ. ಈ ಮೂಲಕ ಲಿಜ್ ಟ್ರಸ್ ಬ್ರಿಟನ್ ನೂತನ ಪ್ರಧಾನಿಯಾಗಿ ಆಯ್ಕೆಯಾಗಿದ್ದಾರೆ.
ಮಾರ್ಗರೆಟ್ ಥ್ಯಾಚರ್ ಮತ್ತು ಥೆರೆಸಾ ಮೇ ನಂತರ ಟ್ರಸ್ ಅವರು ಯುಕೆ ನಲ್ಲಿ ಮೂರನೇ ಮಹಿಳಾ ಪ್ರಧಾನ ಮಂತ್ರಿಯಾಗಿದ್ದಾರೆ.