ಬದಿಯಡ್ಕ: ಪೆರಡಾಲ ಶ್ರೀ ಉದನೇಶ್ವರ ಸಭಾಭವನದಲ್ಲಿ ನಡೆಯುತ್ತಿರುವ ಮಧ್ಯವರ್ಜನ ಶಿಬಿರಕ್ಕೆ ಆಗಮಿಸಿದ್ದ ಮಾಣಿಲ ಶ್ರೀಧಾಮದ ಶ್ರೀಮೋಹನದಾಸ ಪರಮಹಂಸ ಸ್ವಾಮೀಜಿ ಅವರು ಸೋಮವಾರ ಉದನೇಶ್ವರ ಶ್ರೀ ಕ್ಷೇತ್ರಕ್ಕೆ ಭೇಟಿ ನೀಡಿದರು. ಮುಂದೆ ಕ್ಷೇತ್ರದಲ್ಲಿ ನಡೆಯುವ ಜೀರ್ಣೋದ್ಧಾರ ಕಾರ್ಯದ ಬಗ್ಗೆ ಮತ್ತು ಕ್ಷೇತ್ರದ ಇತಿಹಾಸದ ಬಗ್ಗೆ ಆಡಳಿತ ಸಮಿತಿ ಮತ್ತು ಸೇವಾ ಸಮಿತಿಯ ಪದಾಧಿಕಾರಿಗಳು ಮಾಹಿತಿ ನೀಡಿದರು.
ಕ್ಷೇತ್ರದ ಆಡಳಿತ ಮೊಕ್ತೇಸರ ನ್ಯಾಯವಾದಿ ವೆಂಕಟ್ರಮಣ ಭಟ್, ಸದಸ್ಯರಾದ ಪಿ.ಜಿ. ಜಗನ್ನಾಥ ರೈ, ಕೃಷ್ಣ ಪೆರಡಾಲ, ಮಾಜಿ ಆಡಳಿತ ಮೊಕ್ತೇಸರ ಟಿ ಕೆ ನಾರಾಯಣ ಭಟ್, ಸೇವಾ ಸಮಿತಿ ಪ್ರಧಾನ ಕಾರ್ಯದರ್ಶಿ ನಿರಂಜನ ರೈ ಪೆರಡಾಲ, ಕ್ಷೇತ್ರದ ಸಿಬ್ಬಂದಿ ವರ್ಗದವರು ಉಪಸ್ಥಿತರಿದ್ದರು.
ಮಾಣಿಲ ಶ್ರೀಗಳಿಂದ ಉದನೇಶ್ವರ ಕ್ಷೇತ್ರಕ್ಕೆ ಭೇಟಿ
0
ಸೆಪ್ಟೆಂಬರ್ 19, 2022