HEALTH TIPS

ಸಿಧು ಮೂಸೆವಾಲಾ ಹತ್ಯೆ ಪ್ರಕರಣದಲ್ಲಿ ಭಯೋತ್ಪಾದಕ ಗ್ಯಾಂಗ್ ನಂಟು; ಎನ್‌ಐಎ ದಾಳಿ

 

                 ನವದೆಹಲಿ: ಪಂಜಾಬಿ ಗಾಯಕ ಸಿಧು ಮೂಸೆವಾಲಾ ಹತ್ಯೆ ಪ್ರಕರಣದಲ್ಲಿ ಭಯೋತ್ಪಾದಕ ಗ್ಯಾಂಗ್ ಕೈವಾಡದ ಹಿನ್ನೆಲೆಯಲ್ಲಿ ರಾಷ್ಟ್ರೀಯ ತನಿಖಾ ಸಂಸ್ಥೆ (ಎನ್‌ಐಎ), ದೆಹಲಿ, ದೆಹಲಿ-ಎನ್‌ಸಿಆರ್, ಹರಿಯಾಣ ಮತ್ತು ಪಂಜಾಬ್‌ನ ಅನೇಕ ಸ್ಥಳಗಳಲ್ಲಿ ಸೋಮವಾರ ಶೋಧ ಕಾರ್ಯಾಚರಣೆ ನಡೆಸಿದೆ ಎಂದು ಮೂಲಗಳು ತಿಳಿಸಿವೆ.

                     ಈ ಕುರಿತು ಸುದ್ದಿ ಸಂಸ್ಥೆ 'ಎಎನ್‌ಐ' ಟ್ವೀಟ್ ಮಾಡಿದ್ದು, ಸ್ಥಳೀಯ ಪೊಲೀಸ್ ಪಡೆ ಸಹಾಯದೊಂದಿಗೆ ಎನ್‌ಐಎ ಏಕಕಾಲದಲ್ಲಿ ವಿವಿಧೆಡೆ ದಾಳಿ ನಡೆಸಿದೆ ಎಂದು ವರದಿ ಮಾಡಿದೆ.

                ಸಿಧು ಮೂಸೆವಾಲಾ ಹತ್ಯೆಗೆ ಸಂಬಂಧಿಸಿದಂತೆ ಇತ್ತೀಚೆಗಷ್ಟೇ ಭಯೋತ್ಪಾದಕ ನಂಟಿಗೆ ಸಂಬಂಧಿಸಿದಂತೆ ಪ್ರಕರಣ ದಾಖಲಿಸಲಾಗಿತ್ತು.

                 ಗ್ಯಾಂಗ್‌ಸ್ಟರ್ ಲಾರೆನ್ಸ್ ಬಿಷ್ಣೋಯಿ ಸಿಧು ಮೂಸೆವಾಲಾ ಹತ್ಯೆಯ ಪ್ರಮುಖ ಸಂಚುಕೋರನಾಗಿದ್ದು, ಸದ್ಯ ಜೈಲು ಪಾಲಾಗಿದ್ದಾನೆ. ಬಿಷ್ಣೋಯಿ ಸಹಚರ ಕೆನಡಾ ಮೂಲದ ಗ್ಯಾಂಗ್‌ಸ್ಟರ್ ಗೋಲ್ಡಿ ಬ್ರಾರ್ ಪಾತ್ರವನ್ನು ಎನ್‌ಐಎ ತನಿಖೆ ನಡೆಸುತ್ತಿದೆ.

                 ಮೇ 29ರಂದು ಸಿಧು ಮೂಸೆವಾಲಾ ಅವರನ್ನು ದುಷ್ಕರ್ಮಿಗಳು ಗುಂಡಿಕ್ಕಿ ಕೊಲೆಗೈದಿದ್ದರು.


Tweet

Conversation

National Investigation Agency (NIA) raids are underway at various places in Delhi-NCR, Haryana and Punjab in connection with suspected terror gangs linked to the killing of Punjabi singer Sidhu Moose Wala Visuals from Tajpur village in Delhi

 

ಕಾಮೆಂಟ್‌‌ ಪೋಸ್ಟ್‌ ಮಾಡಿ

0 ಕಾಮೆಂಟ್‌ಗಳು
* Please Don't Spam Here. All the Comments are Reviewed by Admin.

Top Post Ad

Click to join Samarasasudhi Official Whatsapp Group

Qries

Qries

Below Post Ad


ಜಾಹಿರಾತು














Qries