ಕಾಸರಗೋಡು: ಮತದಾರರನ್ನು ಸಉಲಭವಗಿ ಗುರುತಿಸಿಕೊಳ್ಳುವುದರ ಜತೆಗೆ ನಕಲಿಮತದಾನ ತಡೆಗಟ್ಟಿ ಚುನಾವಣಾ ಪ್ರಕ್ರಿಯೆಯನ್ನು ಹೆಚ್ಚು ಪಾರದರ್ಶಕಗೊಳಿಸುವ ನಿಟ್ಟಿನಲ್ಲಿ ಕೈಗೊಂಡಿರುವ ಮತದಾರರ ಗುರುತಿನ ಚೀಟಿಗೆ ಆಧಾರ್ ಜೋಡಣೆ ಪ್ರಕ್ರಿಯೆಯಲ್ಲಿ ಶಾಸಕ ಎನ್.ಎ ನೆಲ್ಲಿಕುನ್ನು ತಮ್ಮನ್ನು ಸಕ್ರಿಯವಾಗಿ ತೊಡಗಿಸಿಕೊಂಡರು.
ಚುನಾವಣಾ ಅಪರ ಜಿಲ್ಲಾಧಿಕಾರಿ ನವೀನ್ ಬಾಬು, ಸಿಬ್ಬಂದಿ ಕೆ.ಟಿ.ಧನೇಶ್, ಪಿ.ಎ.ಅಬಿನ್ ಅವರನ್ನೊಳಗೊಂಡ ಅಧಿಕಾರಿಗಳ ತಂಡ ಶಾಸಕ ಎನ್.ಎ ನೆಲ್ಲಿಕುನ್ನು ಅವರ ಮನೆಗೆ ಭೇಟಿ ನೀಡಿ ವೋಟರ್ ಐಡಿಗೆ ಆಧಾರ್ ಲಿಂಕ್ ಮಾಡುವ ಪ್ರಕ್ರಿಯೆಗೆ ಚಾಲನೆ ನೀಡಿದರು. ಚುನಾವಣಾ ಗುರುತಿನ ಚೀಟಿಯೊಂದಿಗೆ ಆಧಾರ್ ಜೋಡಣೆ ಇಂದಿನ ಅನಿವಾರ್ಯತೆಗಳಲ್ಲಿ ಒಂದಾಘಿದ್ದು, ಚುನಾವಣಾ ಪ್ರಕ್ರಿಯೆಯನ್ನು ಹೆಚ್ಚು ಪಾರದರ್ಶಕಗೊಳಿಸುವ ನಿಟ್ಟಿನಲ್ಲಿ ಆಧಾರ್ ಜೋಡನೆ ಪ್ರಕ್ರಿಯೆಯಲ್ಲಿ ಚುನಾವಣಾ ಆಯೋಗದ ಕಾರ್ಯಕ್ಕೆ ಎಲ್ಲರೂ ಕೈಜೋಡಿಸುವಂತೆ ಶಾಸಕ ಎನ್.ಎ.ನೆಲ್ಲಿಕುನ್ನು ಮನವಿಮಾಡಿದರು.
ಮತದಾರರ ಗುರುತಿನ ಚೀಟಿಗೆ ಆಧಾರ್ ಜೋಡಣೆ: ಸಾಥ್ ನೀಡಿದ ಶಾಸಕ ನೆಲ್ಲಿಕುನ್ನು
0
ಸೆಪ್ಟೆಂಬರ್ 20, 2022
Tags