ಪ್ರಜಾಪ್ರಭುತ್ವದ ಆಶಯಗಳನ್ನು ಗೌರವಿಸುವ ಸಲುವಾಗಿ ಜಾಗತಿಕವಾಗಿ ಪ್ರತಿ ವರ್ಷ ಅಂತರರಾಷ್ಟ್ರೀಯ ಪ್ರಜಾಪ್ರಭುತ್ವ ದಿನವನ್ನು (international democracy day) ಆಚರಣೆ ಮಾಡಲಾಗುತ್ತದೆ.
ಸೆಪ್ಟೆಂಬರ್ 15ರಂದು ಅಂತರರಾಷ್ಟ್ರೀಯ ಪ್ರಜಾಪ್ರಭುತ್ವ ದಿನವನ್ನು ಆಚರಣೆ ಮಾಡಲಾಗುತ್ತದೆ.ಇದಕ್ಕೆ ವಿಶ್ವಸಂಸ್ಥೆ ಮಾನ್ಯತೆ ನೀಡಿದೆ.
ಪ್ರಜಾಪ್ರಭುತ್ವದ ಆಶಯಗಳ ರಕ್ಷಣೆ, ಆದರ್ಶಗಳನ್ನು ಪಾಲನೆ ಮಾಡುವುದು, ಸದ್ಯದ ವಾಸ್ತವಿಕತೆಯನ್ನು ಸೂಕ್ಷ್ಮವಾಗಿ ಗಮನಿಸಬೇಕು ಎಂದು ಗಣತಂತ್ರದ ದೇಶಗಳಲ್ಲಿನ ಜನರಲ್ಲಿ ಜಾಗೃತಿ ಮೂಡಿಸಲು ಈ ದಿನವನ್ನು ಆಚರಣೆ ಮಾಡಲಾಗುತ್ತದೆ.
2007ರಲ್ಲಿ ವಿಶ್ವಸಂಸ್ಥೆಯು ಪ್ರತಿ ವರ್ಷ ಸೆಪ್ಟೆಂಬರ್ 15ರಂದು ಅಂತರರಾಷ್ಟ್ರೀಯ ಪ್ರಜಾಪ್ರಭುತ್ವ ದಿನವನ್ನು ಆಚರಿಸಲು ನಿರ್ಧರಿಸಿತು. ಅಂದಿನಿಂದ ಜಾಗತಿಕವಾಗಿ ಪ್ರತಿ ವರ್ಷ ಈ ದಿನವನ್ನು ಆಚರಣೆ ಮಾಡಲಾಗುತ್ತಿದೆ.
1988ರಲ್ಲಿ ಹಲವು ಪ್ರಜಾಪ್ರಭುತ್ವ ಒಕ್ಕೂಟ ಸಂಸ್ಥೆಗಳು 'ಅಂತರರಾಷ್ಟ್ರೀಯ ಪ್ರಜಾಪ್ರಭುತ್ವ ದಿನ' ಆಚರಣೆ ಮಾಡಬೇಕು ಎಂಬ ನಿರ್ಣಯ ಕೈಗೊಂಡವು. ನಂತರದ ದಿನಗಳಲ್ಲಿ ಈ ನಿರ್ಣಯವನ್ನು ವಿಶ್ವಸಂಸ್ಥೆಗೆ ಕಳುಹಿಸಿಕೊಡಲಾಯಿತು.