ಜೈಪುರ: ಉತ್ತರಾಖಂಡದ ಉತ್ತರಕಾಶಿ ಜಿಲ್ಲೆಯಲ್ಲಿ ಭೂಕುಸಿತ ಸಂಭವಿಸಿದ ಪರಿಣಾಮ ಗಂಗೋತ್ರಿ ಧಾಮದಿಂದ ಮರಳುತ್ತಿದ್ದ ರಾಜಸ್ಥಾನದ 400 ಮಂದಿ ಯಾತ್ರಿಕರು ಅಲ್ಲಿ ಸಿಲುಕಿಕೊಂಡಿದ್ದಾರೆ ಎಂದು ಅಧಿಕಾರಿಗಳು ತಿಳಿಸಿದ್ದಾರೆ.
ಉತ್ತರಕಾಶಿಯ ಗಬ್ನಾನಿಯ ಬಳಿ ಭೂಕುಸಿತ ಸಂಭವಿಸಿದ್ದು, ರಾಜಸ್ಥಾನದ ಭಿಲ್ವಾರ, ಅಜ್ಮೇರ್ ಮತ್ತು ಇತರೆಡೆಯ ಯಾತ್ರಿಕರು ಅಲ್ಲಿ ಸಿಲುಕಿಕೊಂಡಿದ್ದು, ಎಲ್ಲರೂ ಸುರಕ್ಷಿತರಾಗಿದ್ದಾರೆ ಎಂದು ಹೇಳಿದ್ದಾರೆ.'ರಸ್ತೆಯಲ್ಲಿ ಸಿಲುಕಿಕೊಂಡಿರುವ ಯಾತ್ರಿಕರಿಗೆ ವಸತಿ ಹಾಗೂ ಆಹಾರದ ವ್ಯವಸ್ಥೆ ಮಾಡಲಾಗಿದೆ' ಎಂದು ರಾಜ್ಯ ವಿಪತ್ತು ನಿರ್ವಹಣಾ ಪಡೆ (ಎಸ್‌ಡಿಆರ್‌ಎಫ್) ಕಮಾಂಡೆಂಟ್ ರಾಜ್‌ಕುಮಾರ್ ಗುಪ್ತಾ ತಿಳಿಸಿದ್ದಾರೆ.