ಕುಂಬಳೆ: ಮುಜುಂಗಾವು ಶ್ರೀ ಭಾರತೀ ವಿದ್ಯಾಪೀಠದಲ್ಲಿ ಗೌರಿ ಹಬ್ಬವನ್ನು ಆಚರಿಸಲಾಯಿತು. ಬೆಳಗ್ಗೆ ವೇದಮೂರ್ತಿ ಕೋಣಮ್ಮೆ ಮಹಾದೇವ ಭಟ್ಟರು ಗಣಪತಿ ಹವನವನ್ನು ನೆರವೇರಿಸಿದರು. ಶಾಲಾ ಶಿಕ್ಷಕಿಯರು ಹಾಗೂ ಮಾತೆಯರು ಕುಂಕುಮಾರ್ಚನೆ ನಡೆಸಿದರು. ವಿದ್ಯಾರ್ಥಿಗಳು ಹಾಗೂ ಶಿಕ್ಷಿಕಿಯರಿದ ಭಜನೆ ನಡೆಯಿತು. ಶಾಲಾ ಆಡಳಿತ ಸಮಿತಿಯ ಅಧ್ಯಕ್ಷ ಎಸ್.ಎನ್.ರಾವ್ ಮುನ್ನಿಪ್ಪಾಡಿ, ಕಾರ್ಯದರ್ಶಿ ಶ್ಯಾಮರಾಜ್ ದೊಡ್ಡಮಾಣಿ, ಶಾಲಾ ಮುಖ್ಯೋಪಾಧ್ಯಾಯ ಶ್ಯಾಂಭಟ್ ದರ್ಭೆಮಾರ್ಗ, ಸಹ ಮುಖ್ಯಶಿಕ್ಷಕಿ ಚಿತ್ರಾಸರಸ್ವತಿ ಪೆರಡಾನ ಉಪಸ್ಥಿತರಿದ್ದರು.
ಮುಜುಂಗಾವು ಶ್ರೀ ಭಾರತೀ ವಿದ್ಯಾಪೀಠದಲ್ಲಿ ಗೌರಿಹಬ್ಬ ಆಚರಣೆ
0
ಸೆಪ್ಟೆಂಬರ್ 03, 2022