ಕಾಸರಗೋಡು: ಪಾಂಗೋಡು ಶ್ರೀ ದುರ್ಗಾಪರಮೇಶ್ವರೀ ಶ್ರೀ ಸುಬ್ರಹ್ಮಣ್ಯ ದೇವಸ್ಥಾನ ಸಾಂಸ್ಕøತಿಕ ಘಟಕ, ಸೀತಮ್ಮ ಪುರುಷ ನಾಯಕ ಸ್ಮಾರಕ ಕನ್ನಡ ಭವನ ಮತ್ತು ಗ್ರಂಥಾಲಯ, ಕರ್ನಾಟಕ ಜಾನಪದ ಪರಿಷತ್ತು ಬೆಂಗಳೂರು ಕೇರಳ ಘಟಕ, ಗಡಿನಾಡ ಸಾಹಿತ್ಯ ಸಾಂಸ್ಕøತಿಕ ಅಕಾಡೆಮಿ ಇವುಗಳ ಸಂಯುಕ್ತ ಆಶ್ರಯದಲ್ಲಿ ಪಾಂಗೋಡು ಶ್ರೀ ದುರ್ಗಾಪರಮೇಶ್ವರೀ ಶ್ರೀ ಸುಬ್ರಹ್ಮಣ್ಯ ದೇವಸ್ಥಾನದ ದುರ್ಗಾಂಬಾ ವೇದಿಕೆಯಲ್ಲಿ ಹಾಗು ಜಿಲ್ಲೆಯ ವಿವಿಧೆಡೆಗಳಲ್ಲಿ ಕಾಸರಗೋಡು ದಸರಾ ಸಾಂಸ್ಕøತಿಕೋತ್ಸವದ ಅಂಗವಾಗಿ ನಡೆಯುವ ದಸರಾ ಸಂಕೀರ್ತನಾ ದಶಾಹವನ್ನು ಸಂಕೀರ್ತನಾ ಸಾಮ್ರಾಟ್ ಹರಿದಾಸ ಜಯಾನಂದ ಕುಮಾರ್ ಹೊಸದುರ್ಗ ಸಂಕೀರ್ತನೆಯೊಂದಿಗೆ ಉದ್ಘಾಟಿಸಿದರು.
ಕಾರ್ಯಕ್ರಮದಲ್ಲಿ ಧಾರ್ಮಿಕ ಮುಂದಾಳು ಬ್ರಹ್ಮಶ್ರೀ ರವೀಶ ತಂತ್ರಿ ಕುಂಟಾರು ಅಧ್ಯಕ್ಷತೆ ವಹಿಸಿದರು. ಗೀತಾ ಎಂ.ಭಟ್ ಮುಖ್ಯ ಅತಿಥಿಯಾಗಿ ಭಾಗವಹಿಸಿದರು. ಸೀತಮ್ಮ ಪುರುಷ ನಾಯಕ ಸ್ಮಾರಕ ಕನ್ನಡ ಭವನ ಮತ್ತು ಗ್ರಂಥಾಲಯ ಸ್ಥಾಪಕಾಧ್ಯಕ್ಷ ವಾಮನ್ ರಾವ್ ಬೇಕಲ್, ಲಕ್ಷ್ಮಣಾನಂದ ಸರಸ್ವತಿ ಮಹಿಳಾ ಭಜನಾ ಸಂಘ ಅಣಂಗೂರು ಇದರ ಸದಸ್ಯರು ಉಪಸ್ಥಿತರಿದ್ದರು. ಕಾಸರಗೋಡು ದಸರಾ ಸಾಂಸ್ಕøತಿಕೋತ್ಸವದ ಸಂಚಾಲಕ ಜಗದೀಶ್ ಕೂಡ್ಲು ಕಾರ್ಯಕ್ರಮ ನಿರೂಪಿಸಿದರು. ಇದೇ ಸಂದರ್ಭದಲ್ಲಿ ಜಯಾನಂದ ಕುಮಾರ್ ಹೊಸದುರ್ಗ ಅವರಿಗೆ ರವೀಶ ತಂತ್ರಿ ಕುಂಟಾರು ಅವರು ಶಾಲು ಹೊದಿಸಿ ಗೌರವಿಸಿದರು.
ದಸರಾ ಸಂಕೀರ್ತನಾ ದಶಾಹ ಉದ್ಘಾಟನೆ
0
ಸೆಪ್ಟೆಂಬರ್ 28, 2022