ಕಾಸರಗೋಡು: ಕೇಂದ್ರ ಸಾಕ್ಷರತಾ ಯೋಜನೆಯಾದ ನವ ಭಾರತ ಸಾಕ್ಷರತಾ ಕಾರ್ಯಕ್ರಮದ ಕಾಸರಗೋಡು ಜಿಲ್ಲಾ ಮಟ್ಟದ ಸ್ವಾಗತ ಸಮಿತಿ ರಚನಾ ಸಭೆ ಸೋಮವಾರ (ಸೆಪ್ಟೆಂಬರ್ 12) ಬೆಳಗ್ಗೆ 11 ಗಂಟೆಗೆ ಜಿಲ್ಲಾ ಪಂಚಾಯತ್ ಸಭಾಂಗಣದಲ್ಲಿ ನಡೆಯಲಿದೆ. ನಗರಸಭಾ ಅಧ್ಯಕ್ಷರು, ಬ್ಲಾಕ್ ಪಂಚಾಯಿತಿ ಅಧ್ಯಕ್ಷರು, ಗ್ರಾಮ ಪಂಚಾಯಿತಿ ಅಧ್ಯಕ್ಷರು, ಶಿಕ್ಷಣ ಸ್ಥಾಯಿ ಸಮಿತಿ ಅಧ್ಯಕ್ಷರು, ಜಿಲ್ಲಾ ಪಂಚಾಯಿತಿ ಸದಸ್ಯರು, ಜಿಲ್ಲಾ ಸಾಕ್ಷರತಾ ಸಮಿತಿ ಸದಸ್ಯರು ಹಾಗೂ ಜಿಲ್ಲಾ ಮಟ್ಟದ ಅಧಿಕಾರಿಗಳು ಭಾಗವಹಿಸುವರು. ಜಿಲ್ಲಾ ಪಂಚಾಯಿತಿ ಅಧ್ಯಕ್ಷೆ ಬೇಬಿ ಬಾಲಕೃಷ್ಣನ್ ಸ್ವಾಗತ ಸಮಿತಿ ರಚನಾ ಸಭೆಯನ್ನು ಉದ್ಘಾಟಿಸುವರು. ಜಿಲ್ಲೆಯಲ್ಲಿ ಒಂಬತ್ತು ಸಾವಿರ ಅನಕ್ಷರಸ್ಥರು ಸಾಕ್ಷರರಾಗಬೇಕು. ಪ್ರತಿ ವಾರ್ಡ್‍ನಲ್ಲಿ 10 ಅನಕ್ಷರಸ್ಥರಿಗೆ ಒಂದು ವರ್ಗದಂತೆ ಎರಡು ತರಗತಿಗಳನ್ನು ನಡೆಸಲು ಯೋಜನೆಯಿರಿಸಿಕೊಳ್ಳಲಾಗಿದೆ ಎಂದು ಪ್ರಕಟಣೆ ತಿಳಿಸಿದೆ.
ನವ ಭಾರತ ಸಾಕ್ಷರತಾ ಕಾರ್ಯಕ್ರಮ: ಇಂದು ಸ್ವಾಗತ ಸಮಿತಿ ರಚನಾ ಸಭೆ
0
ಸೆಪ್ಟೆಂಬರ್ 11, 2022