ತಿರುವನಂತಪುರ: ಕೇಂದ್ರ ಸರ್ಕಾರ ಪಾಪ್ಯುಲರ್ ಫ್ರಂಟ್ ಅನ್ನು ನಿμÉೀಧಿಸಿದ ಬೆನ್ನಲ್ಲೇ ಮುಖ್ಯಮಂತ್ರಿ ಪಿಣರಾಯಿ ವಿಜಯನ್ ಅವರು ಉನ್ನತ ಪೋಲೀಸ್ ಅಧಿಕಾರಿಗಳ ತುರ್ತು ಸಭೆ ಕರೆದಿದ್ದಾರೆ.
ರಾಜ್ಯದಲ್ಲಿ ಪರಿಸ್ಥಿತಿ ಅವಲೋಕಿಸಲು ತುರ್ತು ಸಭೆ ನಡೆಸಲಾಗಿದೆ. ರಾಜ್ಯ ಪೆÇಲೀಸ್ ಮುಖ್ಯಸ್ಥ ಅನಿಲ್ ಕಾಂತ್ ಮತ್ತು ಕಾನೂನು ಸುವ್ಯವಸ್ಥೆ ಉಸ್ತುವಾರಿ ಎಡಿಜಿಪಿ ಅವರೊಂದಿಗೆ ಮುಖ್ಯಮಂತ್ರಿ ಸಭೆ ನಡೆಸಿದರು.
ಸದ್ಯ ಕಾನೂನು ಸುವ್ಯವಸ್ಥೆ ಬಗ್ಗೆ ಆತಂಕ ಪಡುವ ಅಗತ್ಯವಿಲ್ಲ ಎಂದು ಹಿರಿಯ ಪೆÇಲೀಸ್ ಅಧಿಕಾರಿಗಳು ಮುಖ್ಯಮಂತ್ರಿಗಳಿಗೆ ತಿಳಿಸಿದ್ದಾರೆ. ರಾಜ್ಯದಲ್ಲಿ ಪರಿಸ್ಥಿತಿ ನಿಯಂತ್ರಣದಲ್ಲಿದೆ. ಸಂಘರ್ಷ ಪೀಡಿತ ಪ್ರದೇಶಗಳಲ್ಲಿ ಹೆಚ್ಚಿನ ಪೆÇಲೀಸರನ್ನು ನಿಯೋಜಿಸಿ ಭದ್ರತೆಯನ್ನು ಹೆಚ್ಚಿಸಲಾಗಿದೆ. ರಾಜ್ಯದಲ್ಲಿ ಕಟ್ಟೆಚ್ಚರ ವಹಿಸಲಾಗಿದೆ ಎಂದು ಉನ್ನತ ಪೆÇಲೀಸ್ ಅಧಿಕಾರಿಗಳು ಮುಖ್ಯಮಂತ್ರಿಗಳಿಗೆ ಮಾಹಿತಿ ನೀಡಿದರು.
ನಿಷೇಧಾಜ್ಞೆ ನಂತರ ಮುಂದಿನ ಕ್ರಮ ಕೈಗೊಳ್ಳುವಂತೆ ಕೇಂದ್ರ ಸರ್ಕಾರ ರಾಜ್ಯಗಳಿಗೆ ಸೂಚಿಸಿದೆ. ಇದರ ಆಧಾರದ ಮೇಲೆ ರಾಜ್ಯವು ಕ್ರಮ ಕೈಗೊಳ್ಳಲು ಸಿದ್ಧತೆ ನಡೆಸಿದೆ. ನಿಷೇಧಿತ ಸಂಸ್ಥೆಗಳ ಕಚೇರಿಗಳಿಗೆ ಬೀಗ ಹಾಕಿ ಸೀಲ್ ಮಾಡಿ ಅವರ ಆರ್ಥಿಕ ಸಂಪನ್ಮೂಲವನ್ನು ಸ್ಥಗಿತಗೊಳಿಸಲು ಕೇಂದ್ರ ಸೂಚಿಸಿದೆ.
ಪಾಪ್ಯುಲರ್ ಫ್ರಂಟ್ ನಿಷೇಧ; ಕ್ರಮ ಕೈಗೊಳ್ಳುವ ಒತ್ತಡದಲ್ಲಿ ರಾಜ್ಯ ಸರ್ಕಾರ: ಉನ್ನತ ಪೋಲೀಸ್ ಅಧಿಕಾರಿಗಳ ಸಭೆ ನಡೆಸಿದ ಮುಖ್ಯಮಂತ್ರಿ ಅ
0
ಸೆಪ್ಟೆಂಬರ್ 28, 2022