ಕೊಚ್ಚಿ: ಆನೆ ಪ್ರಿಯರ ಅಚ್ಚುಮೆಚ್ಚಿನ ರಾಮಚಂದ್ರನ ಸಾರ್ವಜನಿಕ ಪ್ರದರ್ಶನವನ್ನು ನಿಷೇಧಿಸಿ ಹೈಕೋರ್ಟ್ ಮಧ್ಯಂತರ ಆದೇಶ ಹೊರಡಿಸಿದೆ.
ಪ್ರಾಣಿಗಳ ಮೇಲಿನ ಕ್ರೌರ್ಯವನ್ನು ತಡೆಗಟ್ಟಲು ಕೆಲಸ ಮಾಡುತ್ತಿರುವ ಇಡುಕ್ಕಿ ಮೂಲದ ಸಂಸ್ಥೆಯು ಸಲ್ಲಿಸಿದ ಮರುಪರಿಶೀಲನಾ ಅರ್ಜಿಯ ಮೇರೆಗೆ ಈ ಆದೇಶ ಬಂದಿದೆ.
ಸಹಾಯಕ ಅರಣ್ಯ ಸಂರಕ್ಷಣಾಧಿಕಾರಿ ಸಲ್ಲಿಸಿದ್ದ ವರದಿಯಲ್ಲಿ ಆನೆ ಸವಾರಿಯನ್ನು ಶಾಶ್ವತವಾಗಿ ನಿಷೇಧಿಸುವಂತೆ ಶಿಫಾರಸು ಮಾಡಿತ್ತು. ಈ ವರದಿ ಆಧರಿಸಿ ಕ್ರಮ ಕೈಗೊಳ್ಳಲಾಗಿದೆ. 2017ರಲ್ಲಿ ಆನೆಯ ಬಲಗಣ್ಣು ಸಂಪೂರ್ಣ ಕಳೆದುಕೊಂಡಿದೆ ಎಂದು ವೈದ್ಯಕೀಯ ತಂಡ ವರದಿ ನೀಡಿತ್ತು. ಈ ವರದಿಗೆ ಆರು ವಾರಗಳಲ್ಲಿ ಪ್ರತಿಕ್ರಿಯೆ ನೀಡುವಂತೆ ತೆಚಿಕೋಟುಕಾವ್ ದೇವಸ್ವಂಗೆ ನ್ಯಾಯಾಲಯ ಸೂಚಿಸಿದೆ.
ನ್ಯಾಯಮೂರ್ತಿ ಮುಹಮ್ಮದ್ ಮುಸ್ತಾಕ್ ಮತ್ತು ಅನು ಶಿವರಾಮನ್ ಅವರನ್ನೊಳಗೊಂಡ ಹೈಕೋರ್ಟ್ ವಿಭಾಗೀಯ ಪೀಠವು ಅರ್ಜಿಯ ವಿಚಾರಣೆ ನಡೆಸಿತು.
ತೆಚ್ಚಿಕೋಟುಕಾವ್ ರಾಮಚಂದ್ರನ್ ಗೆ ಸಾರ್ವಜನಿಕ ಪ್ರದರ್ಶನ ನೀಡುವುದಕ್ಕೆ ನಿಷೇಧಿಸಿ ಹೈಕೋರ್ಟ್‍ನ ಮಧ್ಯಂತರ ಆದೇಶ
0
ಸೆಪ್ಟೆಂಬರ್ 14, 2022