HEALTH TIPS

ಸೈಬರ್ ಅಪರಾಧಿಗಳ ವಿರುದ್ಧ ದೇಶದಾದ್ಯಂತ 105 ಸ್ಥಳಗಳಲ್ಲಿ ಸಿಬಿಐ ದಾಳಿ

 

              ನವದೆಹಲಿ: ದೇಶದಾದ್ಯಂತ ಮಂಗಳವಾರ ಸಿಬಿಐ ಅಧಿಕಾರಿಗಳು 105 ಸ್ಥಳಗಳಲ್ಲಿ ಆರ್ಥಿಕ ಅಪರಾಧಗಳಲ್ಲಿ ಭಾಗಿಯಾಗಿರುವ ಸೈಬರ್ ಅಪರಾಧಿಗಳ ವಿರುದ್ಧ ಶೋಧ ನಡೆಸಿದ್ದಾರೆ.

               ರಾಜ್ಯಗಳು ಮತ್ತು ಕೇಂದ್ರಾಡಳಿತ ಪ್ರದೇಶಗಳ ಪೊಲೀಸ್ ಪಡೆಗಳ ಸಹಯೋಗದಲ್ಲಿ ಕಾರ್ಯಾಚರಣೆ ನಡೆಸಿದ್ದಾರೆ.ಈ ವೇಳೆ ನೂರಾರು ಶಂಕಿತರನ್ನು ವಶಕ್ಕೆ ಪಡೆದಿದ್ದಾರೆ.

           ಈ ಕಾರ್ಯಾಚರಣೆಗೆ 'ಆಪರೇಷನ್ ಚಕ್ರ' ಎಂದು ಹೆಸರಿಡಲಾಗಿದೆ. ಒಟ್ಟು 87 ಸ್ಥಳಗಳಲ್ಲಿ ಕಾರ್ಯಾಚರಣೆ ಮಾಡಲಾಗಿದೆ. ರಾಜ್ಯದಲ್ಲಿ ಎರಡು ಕಡೆ ಶೋಧ ಮಾಡಲಾಗಿದೆ ಎಂದು ವರದಿಯಾಗಿದೆ.

           ಚಿನ್ನ, ₹2 ಕೋಟಿ ನಗದು ಸೇರಿದಂತೆ ಡಿಜಿಟಲ್‌ ಸಾಕ್ಷ್ಯಗಳನ್ನು ವಶಕ್ಕೆ ಪಡೆಯಲಾಗಿದೆ ಎಂದು ಎಎನ್‌ಐ ವರದಿ ಮಾಡಿದೆ. ಪ್ರಾಥಮಿಕ ಮಾಹಿತಿ ಪ್ರಕಾರ, ಅಂಡಮಾನ್ ಮತ್ತು ನಿಕೋಬಾರ್ , ದೆಹಲಿ, ಚಂಡೀಗಢ, ಪಂಜಾಬ್, ಗುಜರಾತ್‌, ಕರ್ನಾಟಕ ಮತ್ತು ಅಸ್ಸಾಂನಲ್ಲಿ ಕಾರ್ಯಾಚರಣೆ ನಡೆಸಲಾಗಿದೆ.

                ವಿವಿಧ ಕಾಲ್‌ಸೆಂಟರ್‌ಗಳು, ಆನ್‌ಲೈನ್‌ ಕೆಫೆಗಳ ಮೇಲೆ ದಾಳಿ ಮಾಡಲಾಗಿದೆ ಎಂದು ವರದಿಯಾಗಿದೆ.


ಕಾಮೆಂಟ್‌‌ ಪೋಸ್ಟ್‌ ಮಾಡಿ

0 ಕಾಮೆಂಟ್‌ಗಳು
* Please Don't Spam Here. All the Comments are Reviewed by Admin.

Top Post Ad

Click to join Samarasasudhi Official Whatsapp Group

Qries

Qries

Below Post Ad


ಜಾಹಿರಾತು














Qries