ನವದೆಹಲಿ: ಪ್ರಧಾನ ಮಂತ್ರಿ ಕಿಸಾನ್ ಸಮ್ಮಾನ್ ನಿಧಿಯಡಿ 16 ಸಾವಿರ ಕೋಟಿ ರೂಪಾಯಿಗಳ 12 ನೇ ಕಂತಿನ ಮೊತ್ತವನ್ನು ನೇರ ವರ್ಗಾವಣೆ ಮೂಲಕ ಪ್ರಧಾನ ಮಂತ್ರಿ ನರೇಂದ್ರ ಮೋದಿ ಇಂದು ಬಿಡುಗಡೆ ಮಾಡಲಿದ್ದಾರೆ. ಈ ಯೋಜನೆಯಡಿ ವರ್ಷಕ್ಕೆ ಮೂರು ಕಂತಿನ ರೂಪದಲ್ಲಿ ತಲಾ 2 ಸಾವಿರ ರೂಪಾಯಿಯನ್ನು ಅರ್ಹ ಕೃಷಿಕ ಕುಟುಂಬಗಳು ಪಡೆಯಲು ಅರ್ಹರಾಗಿದ್ದಾರೆ.
ಪ್ರಧಾನಿ ನರೇಂದ್ರ ಮೋದಿ ನಾಳೆ ಪಿಎಂ ಕಿಸಾನ್ ಸಮ್ಮಾನ್ ಸಮ್ಮೇಳನ 2022ಕ್ಕೆ ಚಾಲನೆ ನೀಡಲಿದ್ದಾರೆ. ಭಾರತೀಯ ಕೃಷಿ ಸಂಶೋಧನಾ ಸಂಸ್ಥೆಯಲ್ಲಿ ನಡೆಯಲಿರುವ ಸಮಾವೇಶದಲ್ಲಿ ದೇಶಾದ್ಯಂತ 13 ಸಾವಿರ ರೈತರು ಮತ್ತು ಸುಮಾರು ಒಂದು ಸಾವಿರದ ಐನೂರು ಕೃಷಿ ಸ್ಟಾರ್ಟ್ ಅಪ್ ಗಳು ಪಾಲ್ಗೊಳ್ಳಲಿವೆ.
ಇದೇ ವೇಳೆ 600 ಪ್ರಧಾನ ಮಂತ್ರಿ ಕಿಸಾನ್ ಸಮೃದ್ಧಿ ಕೇಂದ್ರಗಳನ್ನು ಪ್ರಧಾನಿ ಉದ್ಘಾಟಿಸಲಿದ್ದಾರೆ. ಇದರ ಅಡಿಯಲ್ಲಿ ದೇಶದ ರಸಗೊಬ್ಬರ ಚಿಲ್ಲರೆ ಅಂಗಡಿಗಳನ್ನು ಹಂತ ಹಂತವಾಗಿ ಪ್ರದಾನ ಮಂತ್ರಿ ಕಿಸಾನ್ ಸಮೃದ್ಧಿ ಕೇಂದ್ರಗಳಾಗಿ ಪರಿವರ್ತಿಸಲಾಗುವುದು.