ನವದೆಹಲಿ : 'ಕಂದಾಯ ಗುಪ್ತಚರ ನಿರ್ದೇಶನಾಲಯದ (ಡಿಆರ್‌ಐ) ಅಧಿಕಾರಿಗಳು 198 ಕೆ.ಜಿ.ಕ್ರಿಸ್ಟಲ್ ಮೆಟಾಂಪೆಟಮೈನ್ ಮತ್ತು 9 ಕೆ.ಜಿ ಕೊಕೇನ್ ಜಪ್ತಿ ಮಾಡಿದ್ದಾರೆ. ಇವುಗಳ ಒಟ್ಟು ಮೌಲ್ಯ ₹1,476 ಕೋಟಿ' ಎಂದು ಕೇಂದ್ರ ಹಣಕಾಸು ಸಚಿವಾಲಯ ಭಾನುವಾರ ತಿಳಿಸಿದೆ.
'ಮುಂಬೈನ ಡಿಆರ್‌ಐ ಅಧಿಕಾರಿಗಳು ವಾಸಿ ಪ್ರದೇಶದ ಬಳಿ ಕಿತ್ತಳೆ ಹಣ್ಣುಗಳನ್ನು ಸಾಗಿಸುತ್ತಿದ್ದ ಟ್ರಕ್‌ವೊಂದನ್ನು ತಡೆದು ತಪಾಸಣೆ ನಡೆಸಿದ್ದರು. ಕಿತ್ತಳೆ ಹಣ್ಣುಗಳಿದ್ದ ಪೆಟ್ಟಿಗೆಗಳನ್ನು ಪರಿಶೀಲಿಸಿದ್ದಾಗ ದೊಡ್ಡ ಪ್ರಮಾಣದಲ್ಲಿ ಮಾದಕವಸ್ತು ಪತ್ತೆಯಾಗಿತ್ತು. ಇದನ್ನು ದಕ್ಷಿಣ ಆಫ್ರಿಕಾದಿಂದ ತರಲಾಗಿತ್ತು ಎಂಬುದು ವಿಚಾರಣೆಯಿಂದ ತಿಳಿದುಬಂದಿದೆ' ಎಂದು ಸಚಿವಾಲಯದ ಪ್ರಕಟಣೆ ಹೇಳಿದೆ.