HEALTH TIPS

ಗುಜರಾತ್‌ನಲ್ಲಿ ಕೇಬಲ್ ಸೇತುವೆ ಬಿದ್ದು ದುರಂತ: 30 ಮಂದಿ ಸಾವು: ಮೋದಿಯಿಂದ ಸಹಾಯದ ಭರವಸೆ!

 

            ಗುಜರಾತ್‌ನ ಮೊರ್ಬಿಯ ಮಚ್ಚು ನದಿ ಮೇಲೆ ನಿರ್ಮಿಸಲಾಗಿದ್ದ ಕೇಬಲ್ ಸೇತುವೆ ಮುರಿದು ಬಿದ್ದಿದ್ದು ಹಲವರು ನೂರಾರು ಮಂದಿ ನದಿಗೆ ಬಿದ್ದಿದ್ದಾರೆ. ಇನ್ನು 30 ಮಂದಿ ಸಾವನ್ನಪ್ಪಿದ್ದು ಸಾವಿನ ಸಂಖ್ಯೆ ಇನ್ನಷ್ಟು ಹೆಚ್ಚಾಗುವ ಸಾಧ್ಯತೆ. ಇದೆ.

                  ನೂರಾರು ಜನರು ಸೇತುವೆ ಮೇಲೆ ಹೋಗುತ್ತಿದ್ದಾಗ ಈ ದುರಂತ ಸಂಭವಿಸಿದೆ. ರಕ್ಷಣಾ ಸಿಬ್ಬಂದಿ ಮತ್ತು ಪೊಲೀಸರು ರಕ್ಷಣಾ ಕಾರ್ಯಾಚರಣೆಯಲ್ಲಿ ತೊಡಗಿದ್ದಾರೆ. 

                 ಮೋರ್ಬಿಯಲ್ಲಿ ಸಂಭವಿಸಿದ ದುರ್ಘಟನೆಗೆ ಸಂಬಂಧಿಸಿದಂತೆ ಪ್ರಧಾನಿ ನರೇಂದ್ರ ಮೋದಿ ಅವರು ಗುಜರಾತ್ ಸಿಎಂ ಭೂಪೇಂದ್ರ ಪಟೇಲ್ ಮತ್ತು ಇತರ ಅಧಿಕಾರಿಗಳೊಂದಿಗೆ ಮಾತನಾಡಿದರು. ರಕ್ಷಣಾ ಕಾರ್ಯಾಚರಣೆಗಾಗಿ ತಂಡಗಳ ತುರ್ತು ಸಜ್ಜುಗೊಳಿಸುವಂತೆ ಅವರು ಕೋರಿದ್ದಾರೆ. ಪರಿಸ್ಥಿತಿಯನ್ನು ನಿಕಟವಾಗಿ ಮತ್ತು ನಿರಂತರವಾಗಿ ಮೇಲ್ವಿಚಾರಣೆ ಮಾಡಲು ಮತ್ತು ಪೀಡಿತರಿಗೆ ಸಾಧ್ಯವಿರುವ ಎಲ್ಲ ಸಹಾಯವನ್ನು ನೀಡುವಂತೆ ಅವರು ಕೇಳಿಕೊಂಡಿದ್ದಾರೆ.


          ಮೃತರ ಕುಟುಂಬಕ್ಕೆ ಪ್ರಧಾನಿ ಮೋದಿ 2 ಲಕ್ಷ ರೂಪಾಯಿ ಹಾಗೂ ಗಾಯಾಳುಗಳಿಗೆ 50 ಸಾವಿರ ಪರಿಹಾರ ಘೋಷಿಸಿದ್ದಾರೆ.

               ಮೋರ್ಬಿಯಲ್ಲಿ ತೂಗುಸೇತುವೆ ಕುಸಿತದ ದುರಂತದಿಂದ ನಾನು ತೀವ್ರ ದುಃಖಿತನಾಗಿದ್ದೇನೆ. ಪರಿಹಾರ ಮತ್ತು ರಕ್ಷಣಾ ಕಾರ್ಯಾಚರಣೆಗಳು ನಡೆಯುತ್ತಿವೆ. ಗಾಯಗೊಂಡವರಿಗೆ ತಕ್ಷಣದ ಚಿಕಿತ್ಸೆಗೆ ವ್ಯವಸ್ಥೆ ಮಾಡಲು ಸೂಚನೆಗಳನ್ನು ನೀಡಲಾಗಿದೆ. ಈ ನಿಟ್ಟಿನಲ್ಲಿ ಜಿಲ್ಲಾಡಳಿತದೊಂದಿಗೆ ನಿರಂತರ ಸಂಪರ್ಕದಲ್ಲಿದ್ದೇನೆ ಎಂದು ಗುಜರಾತ್ ಸಿಎಂ ಭೂಪೇಂದ್ರ ಪಟೇಲ್ ಟ್ವೀಟ್ ಮಾಡಿದ್ದಾರೆ.

#WATCH | Several people feared to be injured after a cable bridge collapsed in the Machchhu river in Gujarat's Morbi area today. Further details awaited.

ಕಾಮೆಂಟ್‌‌ ಪೋಸ್ಟ್‌ ಮಾಡಿ

0 ಕಾಮೆಂಟ್‌ಗಳು
* Please Don't Spam Here. All the Comments are Reviewed by Admin.

Top Post Ad

Click to join Samarasasudhi Official Whatsapp Group

Qries

Qries

Below Post Ad


ಜಾಹಿರಾತು














Qries