HEALTH TIPS

ಹಿಮಾಚಲ ಪ್ರದೇಶ: 4ನೇ ವಂದೇ ಭಾರತ್ ಎಕ್ಸ್‌ಪ್ರೆಸ್ ರೈಲಿಗೆ ಪ್ರಧಾನಿ ಮೋದಿ ಚಾಲನೆ

 

ಶಿಮ್ಲಾ: ಪ್ರಧಾನಿ ನರೇಂದ್ರ ಮೋದಿ ಅವರು ಇಂದು (ಗುರುವಾರ) ಹಿಮಾಚಲ ಪ್ರದೇಶದಲ್ಲಿ ವಂದೇ ಭಾರತ್ ಎಕ್ಸ್‌ಪ್ರೆಸ್ ರೈಲಿಗೆ ಚಾಲನೆ ನೀಡಿದರು.

ಉನಾದಲ್ಲಿ ನಡೆದ ಕಾರ್ಯಕ್ರಮದಲ್ಲಿ ದೇಶದ ನಾಲ್ಕನೇ ವಂದೇ ಭಾರತ್ ಎಕ್ಸ್‌ಪ್ರೆಸ್ ರೈಲಿಗೆ ಪ್ರಧಾನಿ ಮೋದಿ ಹಸಿರು ನಿಶಾನೆ ತೋರಿದರು.


ಈ ವೇಳೆ ಹಿಮಾಚಲ ಪ್ರದೇಶದ ಮುಖ್ಯಮಂತ್ರಿ ಜೈರಾಮ್ ಠಾಕೂರ್, ರೈಲ್ವೆ ಸಚಿವ ಅಶ್ವಿನಿ ವೈಷ್ಣವ್, ಕೇಂದ್ರ ಸಚಿವ ಅನುರಾಗ್ ಠಾಕೂರ್ ‌ಉಪಸ್ಥಿತರಿದ್ದರು.

ಈ ರೈಲು ದೆಹಲಿ ಮತ್ತು ಅಂಬ್ ಅಂಡೌರಾ ನಡುವೆ ಸಂಚರಿಸಲಿದೆ ಎಂದು ಅಧಿಕಾರಿಗಳು ತಿಳಿಸಿದ್ದಾರೆ.

ದೇಶಿಯವಾಗಿ ವಿನ್ಯಾಸಗೊಳಿಸಲಾದ ಸೆಮಿ ಹೈಸ್ಪೀಡ್ ರೈಲುಗಳನ್ನು ‌'ವಂದೇ ಭಾರತ್ ಎಕ್ಸ್‌ಪ್ರೆಸ್' ರೈಲು ಯೋಜನೆಯಡಿಯಲ್ಲಿ ನವದೆಹಲಿ - ವಾರಾಣಸಿ, ನವದೆಹಲಿ - ಕತ್ರಾ ಹಾಗೂ ಗಾಂಧಿನಗರ ಮತ್ತು ಮುಂಬೈ ನಡುವೆ ಓಡಿಸಲಾಗುತ್ತಿದೆ.

Himachal Pradesh | PM Modi flags off the Vande Bharat Express train from Una railway station to Delhi, in the presence of CM Jairam Thakur, Railways Minister Ashwini Vaishnaw & Union minister & Hamirpur MP Anurag Thakur This is the 4th Vande Bharat train in the country.
Image
Image
Image
1.8K
Reply
Copy link

ಕಾಮೆಂಟ್‌‌ ಪೋಸ್ಟ್‌ ಮಾಡಿ

0 ಕಾಮೆಂಟ್‌ಗಳು
* Please Don't Spam Here. All the Comments are Reviewed by Admin.

Top Post Ad

Click to join Samarasasudhi Official Whatsapp Group

Qries

Qries

Below Post Ad


ಜಾಹಿರಾತು














Qries