ನವದೆಹಲಿ: ಪ್ರಧಾನ ಮಂತ್ರಿ ನರೇಂದ್ರ ಮೋದಿ ಇಂದು ಭಾನುವಾರ 75 ಡಿಜಿಟಲ್ ಬ್ಯಾಂಕಿಂಗ್ ಘಟಕಗಳನ್ನು(DBUs) ದೇಶದ 75 ಜಿಲ್ಲೆಗಳಿಗೆ ಸಮರ್ಪಿಸಿದರು.
ವಿಡಿಯೊ ಕಾನ್ಫರೆನ್ಸ್ ಮೂಲಕ ದೇಶಕ್ಕೆ ಸಮರ್ಪಿಸಿದ ಮಾತನಾಡಿದ ಪ್ರಧಾನಿ, ಸಾಮಾನ್ಯ ಜನರ ಜೀವನವನ್ನು ಸರಳಗೊಳಿಸಲು ಈಗ ನಡೆಯುತ್ತಿರುವ ಅಭಿಯಾನದಲ್ಲಿ ಡಿಜಿಟಲ್ ಬ್ಯಾಂಕಿಂಗ್ ಘಟಕಗಳು ಹೆಚ್ಚು ಮಹತ್ವದ್ದಾಗಿದೆ. ಇದೊಂದು ವಿಶೇಷ ಬ್ಯಾಂಕಿಂಗ್ ವ್ಯವಸ್ಥೆ ಹಾಗೂ ಸೌಲಭ್ಯವಾಗಿದ್ದು ಕನಿಷ್ಠ ಡಿಜಿಟಲ್ ಮೂಲಭೂತ ಸೌಕರ್ಯಗಳ ಮೂಲಕ ಗರಿಷ್ಠ ಸೇವೆಗಳನ್ನು ಜನರಿಗೆ ಒದಗಿಸಲಿದೆ ಎಂದರು.
ಈ ಸೇವೆಗಳು ಕಾಗದದ ಕೆಲಸ ಮತ್ತು ಇತರ ತೊಂದರೆಗಳಿಂದ ಮುಕ್ತವಾಗಿರುತ್ತವೆ. ಇವುಗಳು ಸೌಲಭ್ಯಗಳು ಮತ್ತು ಡಿಜಿಟಲ್ ಬ್ಯಾಂಕಿಂಗ್ ಭದ್ರತೆಯನ್ನು ಹೊಂದಿರುತ್ತವೆ ಎಂದರು.
ಈ ಸಂದರ್ಭದಲ್ಲಿ ಮಾತನಾಡಿದ ಆರ್ ಬಿಐ ಗವರ್ನರ್ ಶಕ್ತಿಕಾಂತ್ ದಾಸ್, ಬ್ಯಾಂಕಿಂಗ್ ಸೇವೆಗಳಿಂದ ಡಿಜಿಟಲ್ ಮೂಲಸೌಕರ್ಯಗಳ ಲಭ್ಯತೆಯನ್ನು ಸುಧಾರಿಸಲು ಆರ್‌ಬಿಐ ಪ್ರಗತಿಪರ ಕ್ರಮಗಳನ್ನು ತೆಗೆದುಕೊಳ್ಳುತ್ತಿದೆ. 75 ಡಿಜಿಟಲ್ ಬ್ಯಾಂಕಿಂಗ್ ಘಟಕಗಳನ್ನು ಸ್ಥಾಪಿಸಲು 2022-23 ಬಜೆಟ್‌ನಲ್ಲಿ ಘೋಷಣೆ ಮಾಡಿದ ನಂತರ, ಭಾರತೀಯ ಬ್ಯಾಂಕ್‌ಗಳ ಅಸನ್ಸ್, ವಾಣಿಜ್ಯ ಬ್ಯಾಂಕ್‌ಗಳು ಮತ್ತು ತಜ್ಞರನ್ನು ಸಂಪರ್ಕಿಸಿದ ನಂತರ ಆರ್‌ಬಿಐ ಮಾರ್ಗಸೂಚಿಗಳನ್ನು ಹೊರಡಿಸಿತು ಎಂದರು.
ಸಾರ್ವಜನಿಕ ಮತ್ತು ಖಾಸಗಿ ವಲಯಗಳ ವಾಣಿಜ್ಯ ಬ್ಯಾಂಕುಗಳು ಈ ಉಪಕ್ರಮಕ್ಕೆ ಉತ್ತಮವಾಗಿ ಪ್ರತಿಕ್ರಿಯಿಸಿವೆ. 75 ಡಿಬಿಯುಗಳು (ಡಿಜಿಟಲ್ ಬ್ಯಾಂಕಿಂಗ್ ಘಟಕಗಳು) ದಾಖಲೆಯ 6 ತಿಂಗಳ ಅವಧಿಯಲ್ಲಿ ದೇಶದಾದ್ಯಂತ ಹರಡಿರುವ 75 ಜಿಲ್ಲೆಗಳಲ್ಲಿ 75 ವರ್ಷಗಳ ಸ್ವಾತಂತ್ರ್ಯದ ಸ್ಮರಣಾರ್ಥ ಸ್ಥಾಪಿಸಲಾಗಿದೆ ಎಂದರು.