ಉಪ್ಪಳ: ಮಂಜೇಶ್ವರ ಉಪಜಿಲ್ಲಾಮಟ್ಟದ ವಿಜ್ಞಾನ ಮೇಳ ನಡೆಯುತ್ತಿದ್ದ ಬೇಕೂರು ಶಾಲೆಯಲ್ಲಿ ಚಪ್ಪರ ಕುಸಿದ ಘಟನೆಯಲ್ಲಿ 20 ರಷ್ಟು ವಿದ್ಯಾರ್ಥಿಗಳಿಗೆ ಗಾಯಗಳಾಗಿದ್ದು, ಮಂಗಲ್ಪಾಡಿ ಸರ್ಕಾರಿ ಆಸ್ಪತ್ರೆಯಲ್ಲಿ ಚಿಕಿತ್ಸೆಗೆ ದಾಖಲಿಸಲಾಗಿದೆ ಎಂದು ತಿಳಿದುಬಂದಿದೆ. ಈ ಪೈಕಿ ಮೂವರನ್ನು ಹೆಚ್ಚಿನ ಚಿಕಿತ್ಸೆಗೆ ಮಂಗಳೂರಿಗೆ ಕರೆದೊಯ್ಯಲಾಗುವುದೆಂದೂ ಅಧಿಕೃತರು ತಿಳಿಸಿದ್ದಾರೆ.
ಘಟನೆ ನಡೆದ ಸ್ಥಳಕ್ಕೆ ಜಿಲ್ಲಾಧಿಕಾರಿ ಭಂಡಾರಿ ಸ್ವಾಗತ್ ರಣವೀರ್ ಚಂದ್, ಜಿಲ್ಲಾ ಪೋಲೀಸ್ ವರಿಷ್ಠ ಡಾ.ವೈಭವ್ ಸಕ್ಸೇನಾ, ಜಿಲ್ಲಾ ವೈದ್ಯಾಧಿಕಾರಿ(ಆರೋಗ್ಯ)ಡಾ.ಎ.ವಿ.ರಾಂದಾಸ್ ಭೇಟಿ ನೀಡಿ ಮಾಹಿತಿ ಪಡೆದುಕೊಂಡರು. ಅಲ್ಲದೆ ವಿದ್ಯಾರ್ಥಿಗಳು ದಾಖಲಾಗಿರುವ ಮಂಗಲ್ಪಾಡಿ ಆಸ್ಪತ್ರೆಗೂ ಭೇಟಿ ನೀಡಿ ಸೂಕ್ತ ಚಿಕಿತ್ಸೆಗೆ ಆದೇಶಿಸಿದರು. ಘಟನೆಯ ಬಗ್ಗೆ ಸಾರ್ವಜನಿಕ ವಿದ್ಯಾಭ್ಯಾಸ ಉಪನಿರ್ದೇಶಕರು ವರದಿಗೆ ಆದೇಶಿಸಿದ್ದಾರೆ.