ಪಟ್ನಾ: ಬಿಹಾರದಲ್ಲಿ ಮುಂದಿನ ವಾರ ನಡೆಯಲಿರುವ ವಿಧಾನಸಭಾ ಉಪಚುನಾವಣೆಗಳಲ್ಲಿ ಬಿಜೆಪಿ ಅಭ್ಯರ್ಥಿಗಳನ್ನು ಬೆಂಬಲಿಸುವುದಾಗಿ ಲೋಕ ಜನಶಕ್ತಿ ಪಕ್ಷದ ಮುಖ್ಯಸ್ಥ ಚಿರಾಗ್ ಪಾಸ್ವಾನ್ ಘೋಷಿಸಿದರು.
ದೆಹಲಿಯಿಂದ ಹಿಂದಿರುಗಿದ ಬಳಿಕ ಭಾನುವಾರ ಇಲ್ಲಿನ ವಿಮಾನನಿಲ್ದಾಣದಲ್ಲಿ ಸುದ್ದಿಗಾರರೊಂದಿಗೆ ಮಾತನಾಡಿದ ಪಾಸ್ವಾನ್, ಮೊಕಾಮಾ ಮತ್ತು ಗೋಪಾಲ್‌ಗಂಜ್ ಕ್ಷೇತ್ರಗಳಲ್ಲಿ ಬಿಜೆಪಿ ಅಭ್ಯರ್ಥಿಗಳ ಪರ ಪ್ರಚಾರ ಮಾಡುವುದಾಗಿ ತಿಳಿಸಿದರು.