ನವದೆಹಲಿ: ರಾಷ್ಟ್ರಪತಿ ದ್ರೌಪದಿ ಮುರ್ಮು ಅವರು ಭಾನುವಾರ ನವದೆಹಲಿಯ ಸೇನಾ ಆಸ್ಪತ್ರೆಯಲ್ಲಿ (ರಿಸರ್ಚ್ ಅಂಡ್ ರೆಫರಲ್) ಕಣ್ಣಿನ ಪೊರೆ ಶಸ್ತ್ರಚಿಕಿತ್ಸೆಗೆ ಒಳಗಾಗಿದ್ದಾರೆ ಎಂದು ರಾಷ್ಟ್ರಪತಿ ಭವನದ ವಕ್ತಾರರು ತಿಳಿಸಿದ್ದಾರೆ.
ಶಸ್ತ್ರಚಿಕಿತ್ಸೆ ಯಶಸ್ವಿಯಾಗಿದ್ದು, ಆಸ್ಪತ್ರೆಯಿಂದ ಡಿಸ್ಚಾರ್ಜ್ ಮಾಡಲಾಗಿದೆ ಎಂದು ಪ್ರಕಟಣೆಯಲ್ಲಿ ತಿಳಿಸಿದ್ದಾರೆ. 64 ವರ್ಷದ ದ್ರೌಪತಿ ಮುರ್ಮು ಅವರು ಜುಲೈ 25, 2022 ರಂದು ಭಾರತದ 15 ನೇ ರಾಷ್ಟ್ರಪತಿಯಾಗಿ ಪ್ರಮಾಣ ವಚನ ಸ್ವೀಕರಿಸಿದರು.