ಬೆಂಗಳೂರು: ದೇಶದಲ್ಲಿ ಇಂದು ಗಾಂಧಿ ಜಯಂತಿ ಆಚರಿಸಲಾಗುತ್ತಿದ್ದು, ವಿವಿಧ ಪಕ್ಷಗಳ ನಾಯಕರು ಮತ್ತು ಸರ್ಕಾರದ ಪ್ರತಿನಿಧಿಗಳು ಗಾಂಧೀಜಿಯವರಿಗೆ ಗೌರವ ನಮನ ಸಲ್ಲಿಸಿದ್ದಾರೆ.
ಭಾನುವಾರ ಬೆಳಗ್ಗೆ ರಾಜ್‌ಘಾಟ್‌ಗೆ ತೆರಳಿದ ಪ್ರಧಾನಿ ನರೇಂದ್ರ ಮೋದಿ, ಗಾಂಧೀಜಿಯವರ ಪ್ರತಿಮೆಗೆ ಪುಷ್ಪ ಅರ್ಪಿಸಿ ಗೌರವ ಸಲ್ಲಿಸಿದ್ದಾರೆ.
ಬಳಿಕ ಟ್ವೀಟ್ ಮಾಡಿರುವ ಅವರು, ದೇಶವು ಆಜಾದಿ ಕಾ ಅಮೃತ್ ಮಹೋತ್ಸವ ಆಚರಿಸುತ್ತಿರುವ ಸಂದರ್ಭದಲ್ಲಿ ಇಂದಿನ ಗಾಂಧಿ ಜಯಂತಿ ಆಚರಣೆ ವಿಶೇಷವಾಗಿದೆ. ಅವರ ಆದರ್ಶಗಳನ್ನು ನಾವೆಲ್ಲರೂ ಪಾಲಿಸೋಣ, ಖಾದಿ ಮತ್ತು ಕರಕುಶಲ ಉತ್ಪನ್ನಗಳನ್ನು ಖರೀದಿಸಿ ಬಳಸೋಣ ಎಂದು ಪ್ರಧಾನಿ ಮೋದಿ ಹೇಳಿದ್ದಾರೆ.
ಕಾಂಗ್ರೆಸ್ ವರಿಷ್ಠೆ ಸೋನಿಯಾ ಗಾಂಧಿ ಮತ್ತು ಪಕ್ಷದ ಹಿರಿಯ ನಾಯಕ ಮಲ್ಲಿಕಾರ್ಜುನ ಖರ್ಗೆ ರಾಜ್‌ಘಾಟ್‌ಗೆ ತೆರಳಿ ಗಾಂಧೀಜಿಯವರಿಗೆ ಗೌರವ ಸಲ್ಲಿಸಿದ್ದಾರೆ.