ಕಾಸರಗೋಡು :ಜಿಲ್ಲಾ ಸ್ಪೋಟ್ರ್ಸ್ ಕೌನ್ಸಿಲ್ ಹಾಗೂ ಜಿಲ್ಲಾ ಕ್ರೀಡಾ ಅಕಾಡೆಮಿ ನೇತೃತ್ವದಲ್ಲಿ ಮಾದಕ ವಸ್ತು ವಿರೋಧಿ ಪ್ರತಿಜ್ಞಾವಿಧಿ ಸ್ವೀಕಾರ ಸಮಾರಂಭ ಉದಯಗಿರಿಯ ಸ್ಪೋಟ್ರ್ಸ್ ಹಾಸ್ಟೆಲ್ ನಲ್ಲಿ ನಡೆಯಿತು.
ಕಾರ್ಯಕ್ರಮದಲ್ಲಿ ಜಿಲ್ಲಾ ಸ್ಪೋಟ್ರ್ಸ್ ಕೌನ್ಸಿಲ್ ಅಧ್ಯಕ್ಷ ಪಿ.ಹಬೀಬ್ ರಹಮಾನ್ ಪ್ರತಿಜ್ಞಾವಿಧಿ ಬೋಧಿಸಿದರು. ಕಾರ್ಯಕ್ರಮದ ಅಂಗವಾಗಿ ಮಾದಕ ದ್ರವ್ಯ ವಿರುದ್ಧ ಜಾಗೃತಿ ತರಗತಿ ನಡೆಸಲಾಯಿತು.
ಸ್ಪೋಟ್ರ್ಸ್ ಕೌನ್ಸಿಲ್ ವತಿಯಿಂದ ಮಾದಕ ದ್ರವ್ಯ ವಿರೋಧಿ ಪ್ರತಿಜ್ಞೆ
0
ಅಕ್ಟೋಬರ್ 12, 2022
Tags