ಕಾಸರಗೋಡು: ಜಿಲ್ಲೆಯಿಂದ ಆರಂಭವಾಗುವ 121 ಕಿ.ಮೀ ಮಲೆನಡು ಹೆದ್ದಾರಿಯಲ್ಲಿ 78 ಕಿ.ಮೀ ಕಾಮಗಾರಿ ಪೂರ್ಣಗೊಂಡಿದ್ದು, ಕೆಲಸಕಾರ್ಯ ಶೀಘ್ರ ಪೂರ್ಣಗೊಳಿಸಲು ಕ್ರಮ ಕೈಗೊಳ್ಳುವುದಾಗಿ ಲೋಕೋಪಯೋಗಿ ಸಚಿವ ಪಿ.ಎ.ಮುಹಮ್ಮದ್ ರಿಯಾಝ್ ತಿಳಿಸಿದರು. ಮಲೆನಾಡು ಹೆದ್ದಾರಿ ಕನಸಿನ ಯೋಜನೆಯಾಗಿದ್ದು ಕೃಷಿ ಕ್ಷೇತ್ರಕ್ಕೂ ಅನುಕೂಲವಾಗಲಿದೆ. ಕೆಲವು ಸ್ಥಳಗಳಲ್ಲಿಅರಣ್ಯ ಇಲಾಖೆಗೆ ಸಂಬಂಧಿಸಿದ ಸಮಸ್ಯೆಗಳಿದ್ದು, ಈ ಬಗ್ಗೆ ಅರಣ್ಯ ಸಚಿವರೊಂದಿಗೆ ಚರ್ಚಿಸಿ ಕಾಲಮಿತಿಯಲ್ಲಿ ಯೋಜನೆ ಪೂರ್ಣಗೊಳಿಸಲಾಗುವುದು. ಜಿಲ್ಲೆಯ ವಿವಿಧ ಲೋಕೋಪಯೋಗಿ ಇಲಾಖೆಯ ಕಾಮಗಾರಿಗಳನ್ನು ಸಚಿವರು ಪರಿಶೀಲಿಸಿದರು.
ಅಧಿಕಾರಿಗಳು ರಸ್ತೆ ಕಾಮಗಾರಿ ಸ್ಥಳಕ್ಕೆ ತೆರಳಿ, ಇನ್ನಷ್ಟು ಪರಿಣಾಮಕಾರಿಯಾಗಿ ಕೆಲಸಮಿರ್ವಹಿಸಲು ಮುಂದಾಗಬೇಕು. ಅಧಿಕಾರಿಗಳು ಮತ್ತು ಗುತ್ತಿಗೆದಾರರ ನಿರ್ಲಕ್ಷ್ಯದಿಂದ ಕೆಲವೊಂದು ರಸ್ತೆಗಳು ಶಿಥಿಲಾವಸ್ಥೆಗೆ ಸಾಗುವಂತಾಗಿದೆ. ಜಿಲ್ಲೆಯಲ್ಲಿ ಕೆಆರ್‍ಎಫ್‍ಬಿ ಕಾರ್ಯಚಟುವಟಿಕೆಗಳ ಬಗ್ಗೆ ಹೆಚ್ಚಿನ ನಿಗಾ ವಹಿಸಬೇಕು. ಮುಂದಿನ ಮಳೆಗಾಲದ ಮೊದಲು ಪೂರ್ಣಗೊಳಿಸಬೇಕಾದ ಕಾಮಗಾರಿಗಳನ್ನು ಕ್ರಮೀಕರಿಸಲಾಗಿದೆ. ಅಧೀಕ್ಷಕ ಅಭಿಯಂತರರು ಮತ್ತು ಮೇಲ್ಪಟ್ಟ ಅಧಿಕಾರಿಗಳು ಪ್ರಭಾರಿ ರಸ್ತೆಗಳಿಗೆ ಭೇಟಿ ನೀಡಿ ವರದಿ ನೀಡಬೇಕು. ಉತ್ತಮ ಕೆಲಸ ಮಾಡುತ್ತಿರುವ ಅಧಿಕಾರಿಗಳಿಗೆ ಸರ್ಕಾರ ಪೆÇ್ರೀತ್ಸಾಹಿಸಲಿದೆ. ಸರ್ಕಾರದ ವೇಗಕ್ಕೆ ಹೊಂದಿಕೊಳ್ಳಲಾಗದ ಅಧಿಕಾರಿಗಳ ವಿರುದ್ಧ ಕ್ರಮ ಕೈಗೊಳ್ಳಲಾಗುವುದು ಎಂದು ಸಚಿವರು ತಿಳಿಸಿದರು.
ಕಾಸರಗೋಡು-ಕಾಞಂಗಾಡು ರಾಜ್ಯ ಹೆದ್ದಾರಿಯ ಚಂದ್ರಗಿರಿ ಜಂಕ್ಷನ್‍ನಲ್ಲಿ ರಸ್ತೆ ಹಾಳಾಗಿರುವುದು ಗಮನಕ್ಕೆ ಬಂದಿದ್ದು, ದುರಸ್ತಿಗಾಗಿ ರೂ.25 ಲಕ್ಷ ರೂ.ಗಳ ಆಡಳಿತಾನುಮತಿ ನೀಡಲಾಗಿದೆ. ನವೆಂಬರ್ 30ರೊಳಗೆ ಕಾಮಗಾರಿ ಪೂರ್ಣಗೊಳಿಸಲು ಅಧಿಕಾರಿಗಳಿಗೆ ಸೂಚನೆ ನೀಡಲಾಗಿದೆ. ನವೆಂಬರ್ 15 ರೊಳಗೆ ರಾಜ್ಯ ಹೆದ್ದಾರಿಯ ಎಲ್ಲಾ ಪ್ರದೇಶಗಳಲ್ಲಿ ದುರಸ್ತಿಕಾರ್ಯ ಕೈಗೆತ್ತಿಕೊಮಡು ಸಮಸ್ಯೆ ಪರಿಹರಿಸಲಾಗುವುದು ಎಂದು ತಿಳಿಸಿದರು.
ಮಲೆನಾಡು ಹೆದ್ದಾರಿ ಕಾಮಗಾರಿ ಶೀಘ್ರ ಪೂರ್ತಿಗೊಳಿಸಲು ಕ್ರಮ: ಸಚಿವ ಪಿ.ಎ.ಮಹಮ್ಮದ್ ರಿಯಾಜ್
0
ಅಕ್ಟೋಬರ್ 09, 2022