ನವದೆಹಲಿ: ಮಹಿಳೆಯರ ಮದುವೆ ವಯಸ್ಸನ್ನು 18ರಿಂದ 21ಕ್ಕೆ ಏರಿಸುವ ಪ್ರಸ್ತಾವವಿರುವ ತಿದ್ದುಪಡಿ ಮಸೂದೆಯ ಪರಿಶೀಲನೆ ನಡೆಸಲು ಸಂಸದೀಯ ಸ್ಥಾಯಿ ಸಮಿತಿಗೆ ನೀಡಿರುವ ಕಾಲಾವಕಾಶವನ್ನು ಮೂರು ತಿಂಗಳ ಅವಧಿಗೆ ಪುನಃ ವಿಸ್ತರಿಸಲಾಗಿದೆ. ಹಾಗಾಗಿ ಈ ಬಾರಿಯ ಚಳಿಗಾಲದ ಸಂಸತ್ ಅಧಿವೇಶನದಲ್ಲಿ ಈ ಮಸೂದೆ ಕುರಿತು ಚರ್ಚೆ ನಡೆಯುವ ಸಾಧ್ಯತೆ ಇಲ್ಲ ಎನ್ನಲಾಗಿದೆ.
ಶಿಕ್ಷಣ, ಮಹಿಳಾ ಮತ್ತು ಮಕ್ಕಳ ಕಲ್ಯಾಣ, ಯುವಜನ ಮತ್ತು ಕ್ರೀಡೆಗೆ ಸಂಬಂಧಿಸಿದ ಸಂಸದೀಯ ಸ್ಥಾಯಿ ಸಮಿತಿಯು ಬಾಲ್ಯ ವಿವಾಹ ತಡೆ (ತಿದ್ದುಪಡಿ) ಕಾಯ್ದೆ- 2021ರ ಪರಿಶೀಲನೆ ನಡೆಸುತ್ತಿದೆ. ಪರಿಶೀಲನೆ ನಡೆಸಲು ಸಮಿತಿಗೆ ನೀಡಿರುವ ಕಾಲಾವಕಾಶವನ್ನು ವಿಸ್ತರಿಸಲು ರಾಜ್ಯಸಭಾ ಅಧ್ಯಕ್ಷ ಜಗದೀಪ್ ಧನಕರ್ ಅವರು ಅನುಮತಿ ನೀಡಿದ್ದಾರೆ. ಈ ಮೂಲಕ ಮೂರನೇ ಬಾರಿಗೆ ಅವಧಿ ವಿಸ್ತರಿಸಿದಂತಾಗಿದೆ. ಮಸೂದೆ ಕುರಿತು ವರದಿ ಸಲ್ಲಿಸಲು ಸಮಿತಿಗೆ ಜನವರಿ 23ರ ವರೆಗೆ ಸಮಯಾವಕಾಶ ಇದ.