ಕಣ್ಣೂರು: ಸಿಪಿಎಂ ರಾಜ್ಯ ಸಮಿತಿ ಮಾಜಿ ಕಾರ್ಯದರ್ಶಿ ಕೊಡಿಯೇರಿ ಬಾಲಕೃಷ್ಣನ್ ನಿಧನರಾಗಿದ್ದಾರೆ. ಕೊಡಿಯೇರಿ ಚೆನ್ನೈ ಅಪೆÇೀಲೋ ಆಸ್ಪತ್ರೆಯಲ್ಲಿ ಚಿಕಿತ್ಸೆ ಪಡೆಯುತ್ತಿದ್ದರು. ಅವರಿಗೆ 69 ವರ್ಷ ವಯಸ್ಸಾಗಿತ್ತು. ನಿನ್ನೆ ರಾತ್ರಿ 8 ಕ್ಕೆ ಮೃತರಾದರು. ಅವರಿಗೆ ಕ್ಯಾನ್ಸರ್ ಸೇರಿದಂತೆ ಆರೋಗ್ಯ ಸಮಸ್ಯೆಗಳಿದ್ದವು.
ಅವರು ಐದು ಬಾರಿ (1982, 1987, 2001, 2006, 2011) ತಲಶ್ಶೇರಿಯಿಂದ ವಿಧಾನಸಭೆಯ ಸದಸ್ಯರಾಗಿ ಆಯ್ಕೆಯಾಗಿದ್ದರು. 2006-11ರ ಅವಧಿಯಲ್ಲಿ ವಿಎಸ್ ಅಚ್ಯುತಾನಂದನ್ ಮುಖ್ಯಮಂತ್ರಿಯಾಗಿದ್ದ ಸಂಪುಟದಲ್ಲಿ ಅವರು ಕೇರಳದ ಗೃಹ ಮತ್ತು ಪ್ರವಾಸೋದ್ಯಮ ಇಲಾಖೆಗಳ ಉಸ್ತುವಾರಿ ಸಚಿವರಾಗಿದ್ದರು. 2001 ಮತ್ತು 2011ರಲ್ಲಿ ವಿಧಾನಸಭೆಯ ವಿರೋಧ ಪಕ್ಷದ ಉಪನಾಯಕರಾಗಿಯೂ ಸೇವೆ ಸಲ್ಲಿಸಿದ್ದರು.
ಅವರು ಕ್ಯಾನ್ಸರ್‍ನಿಂದಾಗಿ ಅಕ್ಟೋಬರ್ 2019 ರಲ್ಲಿ ಯುಎಸ್‍ನಲ್ಲಿ ಚಿಕಿತ್ಸೆ ಪಡೆದರು ಮತ್ತು ಈ ವರ್ಷ ಮತ್ತೆ ಚಿಕಿತ್ಸೆಗೆ ತೆರಳಿದ್ದರು. ಈ ವರ್ಷ ಕೊಚ್ಚಿಯಲ್ಲಿ ನಡೆದ ಸಿಪಿಎಂ ರಾಜ್ಯ ಸಮ್ಮೇಳನದಲ್ಲಿ ಸತತ ಮೂರನೇ ಅವಧಿಗೆ ರಾಜ್ಯ ಕಾರ್ಯದರ್ಶಿಯಾಗಿ ಆಯ್ಕೆಯಾಗಿದ್ದರು. ಅನಾರೋಗ್ಯದ ಕಾರಣ ಅವರು ಕಾರ್ಯದರ್ಶಿ ಹುದ್ದೆಗೆ ರಾಜೀನಾಮೆ ನೀಡಿದರು.
ಆಗಸ್ಟ್ 29 ರಂದು ಕೊಡಿಯೇರಿ ಬಾಲಕೃಷ್ಣನ್ ಅವರನ್ನು ವಿಶೇಷ ಚಿಕಿತ್ಸೆಗಾಗಿ ಚೆನ್ನೈಗೆ ಕರೆದೊಯ್ದಿದ್ದರು. ಆಗಸ್ಟ್ 28 ರಂದು ಸಿಪಿಎಂ ರಾಜ್ಯ ಕಾರ್ಯದರ್ಶಿ ಸ್ಥಾನಕ್ಕೆ ಕೊಡಿಯೇರಿ ಬಾಲಕೃಷ್ಣನ್ ರಾಜೀನಾಮೆ ನೀಡಿದ್ದರು. ನಂತರ ರಾಜ್ಯ ಸಮಿತಿ ಸಭೆಯು ಎಂ.ವಿ.ಗೋವಿಂದನ್ ಅವರನ್ನು ಕಾರ್ಯದರ್ಶಿಯನ್ನಾಗಿ ನೇಮಿಸಿತು.
ಸಿಪಿಎಂನ ರಾಜ್ಯ ಸಮಿತಿ ಮಾಜಿ ಕಾರ್ಯದರ್ಶಿ ಕೊಡಿಯೇರಿ ಬಾಲಕೃಷ್ಣನ್ ನಿಧನ
0
ಅಕ್ಟೋಬರ್ 02, 2022
Tags