HEALTH TIPS

ಜಮ್ಮು: ಕಾರಾಗೃಹ ಇಲಾಖೆ ಪೊಲೀಸ್ ಮಹಾನಿರ್ದೇಶಕ ಲೋಹಿಯಾ ಕೊಲೆ

 

          ಜಮ್ಮು: ಕಾರಾಗೃಹ ಇಲಾಖೆ ಪೊಲೀಸ್ ಮಹಾನಿರ್ದೇಶಕ ಎಚ್ ಕೆ ಲೋಹಿಯಾ ಅವರು ಸೋಮವಾರ ಜಮ್ಮುವಿನಲ್ಲಿ ಅನುಮಾನಾಸ್ಪದವಾಗಿ ಕೊಲೆಯಾಗಿದ್ದಾರೆ. ಅವರ ಮನೆಯ ಸಹಾಯಕನೇ ಕೊಲೆ ಮಾಡಿರಬಹುದು ಎಂದು ಪೊಲೀಸರು ಶಂಕಿಸಿದ್ದಾರೆ.

          ಮನೆ ಸಹಾಯಕ ತಲೆಮರೆಸಿಕೊಂಡಿದ್ದು, ಆತನಿಗಾಗಿ ಶೋಧ ಆರಂಭಿಸಲಾಗಿದೆ ಎಂದು ಜಮ್ಮು ವಲಯದ ಹೆಚ್ಚುವರಿ ಪೊಲೀಸ್ ಮಹಾನಿರ್ದೇಶಕ ಮುಖೇಶ್ ಸಿಂಗ್ ತಿಳಿಸಿದ್ದಾರೆ.

                 1992ರ ಬ್ಯಾಚ್‌ನ ಐಪಿಎಸ್ ಅಧಿಕಾರಿಯಾಗಿದ್ದ 57 ವರ್ಷದ ಲೋಹಿಯಾ ಅವರು ಜಮ್ಮುವಿನ ಹೊರವಲಯದಲ್ಲಿರುವ ಉದಯವಾಲಾ ನಿವಾಸದಲ್ಲಿ ನೆಲೆಸಿದ್ದರು. ಅಲ್ಲಿಯೇ ಅವರ ಕತ್ತು ಸೀಳಿ ಕೊಲೆ ಮಾಡಲಾಗಿದೆ.


                    ಅವರನ್ನು ಆಗಸ್ಟ್‌ನಲ್ಲಿ ಕಾರಾಗೃಹ ಇಲಾಖೆಯ ಡಿಜಿಪಿಯಾಗಿ ನಿಯೋಜಿಸಲಾಗಿತ್ತು.

                 'ಅಧಿಕಾರಿಯೊಂದಿಗೆ ಇದ್ದ ಗೃಹ ಸಹಾಯಕ ತಲೆಮರೆಸಿಕೊಂಡಿದ್ದಾನೆ. ಅತನಿಗಾಗಿ ಹುಡುಕಾಟ ಪ್ರಾರಂಭವಾಗಿದೆ' ಎಂದು ಎಡಿಜಿಪಿ ಹೇಳಿದ್ದಾರೆ.

                    ವಿಧಿವಿಜ್ಞಾನ ಮತ್ತು ಅಪರಾಧ ತಂಡಗಳು ಸ್ಥಳಕ್ಕೆ ಧಾವಿಸಿವೆ. ಹಿರಿಯ ಅಧಿಕಾರಿಗಳು ಸ್ಥಳ ಪರಿಶೀಲನೆ ನಡೆಸಿದ್ದಾರೆ.    ಅಧಿಕಾರಿ ಸಾವಿಗೆ ಜಮ್ಮು ಕಾಶ್ಮೀರ ಪೊಲೀಸ್ ಇಲಾಖೆ ತೀವ್ರ ಬೇಸರ ವ್ಯಕ್ತಪಡಿಸಿದೆ.


ಕಾಮೆಂಟ್‌‌ ಪೋಸ್ಟ್‌ ಮಾಡಿ

0 ಕಾಮೆಂಟ್‌ಗಳು
* Please Don't Spam Here. All the Comments are Reviewed by Admin.

Top Post Ad

Click to join Samarasasudhi Official Whatsapp Group

Qries

Qries

Below Post Ad


ಜಾಹಿರಾತು














Qries