ನವದೆಹಲಿ: ಗೋವನ್ನು ರಾಷ್ಟ್ರೀಯ ಪ್ರಾಣಿ ಎಂದು ಘೋಷಿಸಲು ಕೇಂದ್ರ ಸರ್ಕಾರಕ್ಕೆ ನಿರ್ದೇಶನ ನೀಡುವಂತೆ ಕೋರಿ ಸಲ್ಲಿಕೆಯಾಗಿದ್ದ ಅರ್ಜಿಯ ವಿಚಾರಣೆಗೆ ಸುಪ್ರೀಂ ಕೋರ್ಟ್ ಸೋಮವಾರ ನಿರಾಕರಿಸಿತು.
'ನಿಮಗೆ ಯಾವ ಮೂಲಭೂತ ಹಕ್ಕಿನ ಉಲ್ಲಂಘನೆಯಾಗಿದೆ ಎಂಬುದನ್ನು ತಿಳಿಸಿ' ಎಂದು ನ್ಯಾಯಮೂರ್ತಿಗಳಾದ ಎಸ್.ಕೆ.ಕೌಲ್ ಮತ್ತು ಅಭಯ್ ಎಸ್.
ಓಕಾ ಅವರ ಪೀಠವು ಅರ್ಜಿದಾರರನ್ನು ಪ್ರಶ್ನಿಸಿತು.
'ಗೋವನ್ನು ರಾಷ್ಟ್ರೀಯ ಪ್ರಾಣಿ ಎಂದು ಘೋಷಿಸುವುದು ನ್ಯಾಯಾಲಯದ ಕೆಲಸವೇ? ಈ ರೀತಿಯ ಅರ್ಜಿಯನ್ನು ಏಕೆ ಸಲ್ಲಿಸಿದ್ದೀರಿ. ಇದಕ್ಕಾಗಿ ನಿಮಗೆ ದಂಡ ವಿಧಿಸಬಹುದಲ್ಲವೇ? ಯಾವ ಮೂಲಭೂತ ಹಕ್ಕಿನ ಉಲ್ಲಂಘನೆಯಾಗಿದೆ? ನೀವು ನ್ಯಾಯಾಲಯಕ್ಕೆ ಬಂದಿದ್ದೀರಿ ಎಂಬ ಕಾರಣಕ್ಕೆ ನಾವು ಕಾನೂನನ್ನು ಗಾಳಿಗೆ ತೂರಬೇಕೆ?' ಎಂದು ಪೀಠ ಪ್ರಶ್ನಿಸಿತು.
'ಗೋವಿನ ರಕ್ಷಣೆ ಅತ್ಯಂತ ಮಹತ್ವದ ವಿಷಯವಾಗಿದೆ' ಎಂದು ಗೋವಂಶ ಸೇವಾ ಸದನ ಮತ್ತು ಇತರರನ್ನು ಪ್ರತಿನಿಧಿಸಿದ್ದ ವಕೀಲರು ಸಾರ್ವಜನಿಕ ಹಿತಾಸಕ್ತಿ ಅರ್ಜಿ (ಪಿಐಎಲ್) ಸಲ್ಲಿಸಿದ್ದರು.