ನವದೆಹಲಿ: ಏಕಕಾಲದಲ್ಲಿ ಎರಡು ಪದವಿ ಪಡೆಯಲು ಅನುವಾಗುವಂತೆ ನಿಯಮಗಳಿಗೆ ಶಾಸನಬದ್ಧ ಬದಲಾವಣೆ ಮಾಡಬೇಕು ಎಂದು ವಿಶ್ವವಿದ್ಯಾಲಯ ಅನುದಾನ ಆಯೋಗ (ಯುಜಿಸಿ) ಶುಕ್ರವಾರ ಎಲ್ಲ ವಿಶ್ವವಿದ್ಯಾಲಯಗಳಿಗೆ ಸೂಚಿಸಿದೆ.
ಯುಜಿಸಿ ಕಳೆದ ಏಪ್ರಿಲ್ ತಿಂಗಳಲ್ಲಿ ವಿದ್ಯಾರ್ಥಿಗಳು ಏಕಕಾಲದಲ್ಲಿ ಪೂರ್ಣಪ್ರಮಾಣದಲ್ಲಿ ಎರಡು ಪದವಿ ಕೋರ್ಸ್ ಅಧ್ಯಯನ ನಡೆಸಲು ಅವಕಾಶ ಕಲ್ಪಿಸುವ ಪ್ರಸ್ತಾವಕ್ಕೆ ಅನುಮೋದನೆ ನೀಡಿತ್ತು.