HEALTH TIPS

ಬುರ್ಖಾ ನಿಷೇಧಿಸಿದ ಸ್ವಿಟ್ಜರ್ಲೆಂಡ್, ನಿಯಮ ಉಲ್ಲಂಘಿಸಿದರೆ ಭಾರಿ ದಂಡ

 

            ಬರ್ನ್: ಸ್ವಿಟ್ಜರ್ಲೆಂಡ್ ನಲ್ಲಿ ಬುರ್ಖಾ ನಿಷೇಧ ಜಾರಿಗೆ ತರಲಾಗಿದ್ದು, ನಿಯಮ ಉಲ್ಲಂಘಿಸಿದರೆ ಭಾರಿ ದಂಡ ವಿಧಿಸುವುದಾಗಿ ಅಲ್ಲಿನ ಸರ್ಕಾರ ಎಚ್ಚರಿಕೆ ನೀಡಿದೆ.

           ಸ್ವಿಟ್ಜರ್ಲೆಂಡ್ ನಲ್ಲಿ ಸಾರ್ವಜನಿಕ ಸ್ಥಳಘಲ್ಲಿ ಬುರ್ಖಾ ಧರಿಸುವುದನ್ನು ನಿಷೇಧಿಸಲಾಗಿದ್ದು, ನಿಯಮ ಉಲ್ಲಂಘಿಸಿದರೆ 1 ಸಾವಿರ ಡಾಲರ್ ದಂಡ  ತೆರಬೇಕಾಗಿದೆ. ಈ ಸಂಬಂಧ  ದಂಡ ವಿಧಿಸುವ ನಿಟ್ಟಿನಲ್ಲಿ ಸರ್ಕಾರ ಪ್ರಸ್ತಾವನೆ ಸಲ್ಲಿಸಿದೆ.

             ಹಿಜಾಬ್ ವಿರೋಧಿಸಿ ಇರಾನ್ ನಲ್ಲಿ ಭಾರೀ ಪ್ರತಿಭಟನೆ ನಡೆಯುತ್ತಿರುವ ನಡುವೆಯೇ  ಸ್ವಿಟ್ಜರ್ಲೆಂಡ್ ಸರ್ಕಾರ ಈ ನಿರ್ಧಾರ ಕೈಗೊಂಡಿದೆ. ಸ್ವಿಟ್ಜರ್ಲೆಂಡ್ ಬುರ್ಖಾ ನಿಷೇಧ ಹಾಗೂ  ಉಲ್ಲಂಘನೆಗೆ 1 ಸಾವಿರ ಡಾಲರ್ ದಂಡ ವಿಧಿಸುವ ಪ್ರಸ್ತಾವನೆ ಸಲ್ಲಿಸಲಾಗಿದೆ. ಅಕ್ಟೋಬರ್ 12 ರಂದು  ಸಂಸತ್ತಿನಲ್ಲಿ ಈ ಮಸೂದೆ ಮಂಡಿಸಲಾಗಿದೆ.

             ಕಳೆದ ವರ್ಷ  ಜನಾಭಿಪ್ರಾಯ ಸಂಗ್ರಹಿಸಿದ ಬಳಿಕ  ಸುರಕ್ಷತೆ ಕಾರಣ ನೀಡಿ ಮುಖ ಮುಚ್ಚುವ ವಸ್ತ್ರಗಳನ್ನು ನಿಷೇಧಿಸಲಾಗಿತ್ತು.  ಇದೀಗ ಈ ನಿಯಮ ಉಲ್ಲಂಘಿಸಿದರೆ  ಭಾರೀ ದಂಡ ವಿಧಿಸುವ ಪ್ರಸ್ತಾವನೆ ಮಂಡಿಸಲಾಗಿದೆ.

ಕಾಮೆಂಟ್‌‌ ಪೋಸ್ಟ್‌ ಮಾಡಿ

0 ಕಾಮೆಂಟ್‌ಗಳು
* Please Don't Spam Here. All the Comments are Reviewed by Admin.

Top Post Ad

Click to join Samarasasudhi Official Whatsapp Group

Qries

Qries

Below Post Ad


ಜಾಹಿರಾತು














Qries