ಕಾಸರಗೋಡು: ನವಕೇರಳ ಕ್ರಿಯಾ ಯೋಜನೆಯ ಅಂಗವಾಗಿ ಜಿಲ್ಲಾ ಪಂಚಾಯಿತಿ ವತಿಯಿಂದ ಜಿಲ್ಲೆಯ 12 ಶಾಲೆಗಳಲ್ಲಿ ನೀರಿನ ಗುಣಮಟ್ಟವನ್ನು ಪರೀಕ್ಷಿಸಲು ಪ್ರಯೋಗಾಲಯಗಳನ್ನು ಆರಂಭಿಸುತ್ತಿದೆ. ಜಿಲ್ಲೆಯ ವಿವಿಧ ಬಾವಿಗಳು ಮತ್ತು ಜಲಮೂಲಗಳಿಂದ ಸಂಗ್ರಹಿಸಲಾದ ನೀರಿನ ಮಾದರಿಗಳ ಗುಣಮಟ್ಟವನ್ನು ಪರೀಕ್ಷಿಸಲಾಗಿದ್ದು, ಹೆಚ್ಚಿನ ಮಾದರಿಗಳು ಕಲುಷಿತಗೊಂಡಿರುವುದು ಕಂಡುಬಂದಿದೆ. ಈ ಹಿನ್ನೆಲೆಯಲ್ಲಿ ಆಯ್ದ 12 ಶಾಲೆಗಳಲ್ಲಿ ನೀರಿನ ಗುಣಮಟ್ಟವನ್ನು ಪರೀಕ್ಷಿಸಲು ಪ್ರಯೋಗಾಲಯಗಳನ್ನು ಆರಂಭಿಸಲು ನಿರ್ಧರಿಸಲಾಗಿದೆ.
ಜಿಲ್ಲೆಯ ಸ್ಥಳೀಯಾಡಳಿತ ಸಂಸ್ಥೆಗಳ ಬಾವಿ ಹಾಗೂ ಇತರ ಜಲಮೂಲಗಳ ನೀರಿನ ಮಾದರಿಗಳನ್ನು ಪರಿಶೀಲಿಸಿದಾಗ ಮಾಲಿನ್ಯ ತುಂಬಿಕೊಂಡಿದ್ದು, ಬಳಕೆಗೆ ಯೋಗ್ಯವಾಗಿಲ್ಲವೆಂದು ತಿಳಿದು ಬಂದಿದೆ. ಶೇಕಡಾ 90 ಕ್ಕಿಂತ ಹೆಚ್ಚುಮಲೀನಗೊಂಡಿರುವ ಮೂರು, ಶೇಕಡಾ 80-90 ರ ನಡುವೆ ಮೂರು, ಶೇಕಡಾ 60-80 ರ ನಡುವೆ ಹನ್ನೆರಡು ಮತ್ತು ಶೇಕಡಾ 50 ಕ್ಕಿಂತ ಹೆಚ್ಚು ಮಲೀನಗೂಂಡಿರುವ ಏಳು ಜಲಮೂಲಗಳನ್ನು ತಪಾಸಣೆಯಲ್ಲಿ ಪತ್ತೆಹಚ್ಚಲಾಗಿದೆ..
ರಸಾಯನಶಾಸ್ತ್ರ ಪ್ರಯೋಗಾಲಯಗಳನ್ನು ಹೊಂದಿರುವ ಹೈಯರ್ ಸೆಕೆಂಡರಿ ಶಾಲೆಗಳಲ್ಲಿ ರಸಾಯನಶಾಸ್ತ್ರ ಶಿಕ್ಷಕರು ಮತ್ತು ವಿಜ್ಞಾನ ವಿದ್ಯಾರ್ಥಿಗಳ ಸಹಾಯದಿಂದ ಪ್ರಯೋಗಾಲಯವನ್ನು ನಡೆಸಲಾಗುವುದು. ನೀರಿನ ಗುಣಮಟ್ಟ ಪರೀಕ್ಷಾ ಪ್ರಯೋಗಾಲಯವನ್ನು ಸ್ಥಾಪಿಸುವುದರಿಂದ , ಸ್ಥಳೀಯ ನೀರಿನ ಮೂಲಗಳ ಮಾದರಿಗಳನ್ನು ಉಚಿತವಾಗಿ ಪರೀಕ್ಷಿಸಬಹುದಾಗಿದೆ. ಜಿಲ್ಲಾ ಶಿಕ್ಷಣ ಉಪನಿರ್ದೇಶಕರು ಕಾರ್ಯನಿರ್ವಹಣಾಧಿಕಾರಿಯಾಗಿ ಕಾರ್ಯನಿರ್ವಹಿಸುತ್ತಿದ್ದು, ಯೋಜನೆಯ ಟೆಂಡರ್ ಪ್ರಕ್ರಿಯೆ ಈಗಾಘಲೇ ಪೂರ್ಣಗೊಂಡಿದೆ. ಪ್ರಯೋಗಾಲಯಗಳ ನಿರ್ಮಾಣ ಕಾಮಗಾರಿಗಳು ಆರಂಭಿಸಲಾಗಿದೆ ಎಂದು ನವಕೇರಳ ಮಿಷನ್ ನ ಜಿಲ್ಲಾ ಸಂಯೋಜಕ ಕೆ. ಬಾಲಕೃಷ್ಣನ್ ತಿಳಿಸಿದ್ದಾರೆ.
ನೀರಿನ ಮೂಲಗಳು ಕಲುಷಿತ: ಗುಣಮಟ್ಟ ತಪಾಸಣೆಗೆ ಬರಲಿದೆ ಪ್ರಯೋಗಾಲಯ
0
ಅಕ್ಟೋಬರ್ 06, 2022
Tags