ನವದೆಹಲಿ: ಮಾತಿನ ಸಮಸ್ಯೆ ಇರುವ ಕಾರಣಕ್ಕಾಗಿ ವಿದ್ಯಾರ್ಥಿನಿಯೊಬ್ಬರಿಗೆ ವೈದ್ಯಕೀಯ ಪದವಿ ಪ್ರವೇಶವನ್ನು ನಿರಾಕರಿಸಲಾಗಿದೆ. ಈ ಸಂಬಂಧ ವಿದ್ಯಾರ್ಥಿನಿಯು ಸುಪ್ರೀಂ ಕೋರ್ಟ್‌ಗೆ ಅರ್ಜಿ ಸಲ್ಲಿಸಿದ್ದು, ಪ್ರತಿಕ್ರಿಯೆ ನೀಡುವಂತೆ ಕೇಂದ್ರ ಸರ್ಕಾರಕ್ಕೆ ನ್ಯಾಯಲಯವು ಮೂರು ವಾರಗಳ ಗಡುವು ನೀಡಿದೆ.
ಭಾರತೀಯ ವೈದ್ಯಕೀಯ ಪರಿಷತ್ತಿನ ವೈದ್ಯಕೀಯ ಪದವಿ ಶಿಕ್ಷಣ ನಿಯಮ, 1997ರ ತಿದ್ದುಪಡಿ ಪ್ರಶ್ನಿಸಿ ವಿದ್ಯಾರ್ಥಿನಿಯು ಸುಪ್ರೀಂ ಕೋರ್ಟ್‌ಗೆ ಅರ್ಜಿ ಸಲ್ಲಿಸಿದ್ದಾರೆ. ಈ ಅರ್ಜಿಯ ವಿಚಾರಣೆ ನಡೆಸಿದ ನ್ಯಾಯಮೂರ್ತಿಗಳಾದ ಡಿ.ವೈ. ಚಂದ್ರಚೂಡ್ ಮತ್ತು ಹಿಮಾ ಕೊಹ್ಲಿ ಅವರಿದ್ದ ಪೀಠವು, ಕೇಂದ್ರ ಸರ್ಕಾರ, ಭಾರತೀಯ ವೈದ್ಯಕೀಯ ಆಯೋಗ ಮತ್ತು ಇತರರಿಗೆ ನೋಟಿಸ್ ನೀಡಿದೆ.
ಅಂಗವಿಕಲ ವ್ಯಕ್ತಿಗಳ ಹಕ್ಕುಗಳ ಕಾಯ್ದೆ 2016ರಲ್ಲಿ ನಿಗದಿ ಮಾಡಿರುವಂಥ ನಿಯಮದಂತೆಯೇ ವಿದ್ಯಾರ್ಥಿನಿಗೆ ವೈದ್ಯಕೀಯ ಪದವಿ ಪ್ರವೇಶವನ್ನು ನಿರಾಕರಿಸಲಾಗಿದೆ. ವಿದ್ಯಾರ್ಥಿನಿಗೆ ಶೇ 40ರಷ್ಟು ಅಂಗವಿಲಕತೆ ಇದೆ. ಆದರೂ, ನೋಟಿಸ್ ಜಾರಿ ಮಾಡುವಂತೆ ಪೀಠ ಹೇಳಿದೆ.