HEALTH TIPS

ಗಾಂಧಿ ಕುಟುಂಬಕ್ಕೆ ಕಾರ್ಯಕರ್ತರ ಹೃದಯದಲ್ಲಿ ವಿಶೇಷ ಸ್ಥಾನವಿದೆ: ಶಶಿ ತರೂರ್‌

 

              ನವದೆಹಲಿ: 'ಕಾಂಗ್ರೆಸ್‌ ಪಕ್ಷವನ್ನು ಪುನಶ್ಚೇತನಗೊಳಿಸುವ ಕಾರ್ಯ ಆರಂಭವಾಗಿದೆ' ಎಂದು ಸಂಸದ ಹಾಗೂ ಪಕ್ಷದ ಅಧ್ಯಕ್ಷ ಸ್ಥಾನಕ್ಕೆ ಸ್ಪರ್ಧಿಸಿದ್ದ ಶಶಿ ತರೂರ್‌ ಬುಧವಾರ ಹೇಳಿದ್ದಾರೆ.

                 ಹಿರಿಯ ನಾಯಕ ಮಲ್ಲಿಕಾರ್ಜುನ ಖರ್ಗೆ ಅವರು ಪಕ್ಷದ ನೂತನ ಅಧ್ಯಕ್ಷರಾಗಿ ಆಯ್ಕೆಯಾದ ಬೆನ್ನಲ್ಲೇ ಅವರಿಂದ ಈ ಹೇಳಿಕೆ ಹೊರಬಿದ್ದಿದೆ.

                 'ಪಕ್ಷದ ಅಧ್ಯಕ್ಷ ಸ್ಥಾನಕ್ಕೆ ಪ್ರಜಾಸತ್ತಾತ್ಮಕವಾಗಿ ಸ್ಪರ್ಧೆ ನಡೆಯಿತು. ಇದು ಪಕ್ಷದ ಎಲ್ಲ ಹಂತಗಳಲ್ಲಿ ಉತ್ಸಾಹವನ್ನು ಹೆಚ್ಚಿಸಿದೆ. ಸಂಘಟನಾತ್ಮಕವಾಗಿ ಪಕ್ಷದಲ್ಲಿ ಬದಲಾವಣೆ ತರುವ ನಿಟ್ಟಿನಲ್ಲಿ ಆರೋಗ್ಯಕರ ಹಾಗೂ ರಚನಾತ್ಮಕ ಚರ್ಚೆಗೆ ಈ ಚುನಾವಣೆ ಕಾರಣವಾಗಿದೆ' ಎಂದು ಅವರು ಇಲ್ಲಿ ಬಿಡುಗಡೆ ಮಾಡಿರುವ ಪ್ರಕಟಣೆಯಲ್ಲಿ ತಿಳಿಸಿದ್ದಾರೆ.

                 'ನೆಹರೂ-ಗಾಂಧಿ ಕುಟುಂಬಕ್ಕೆ ಪಕ್ಷದ ಕಾರ್ಯಕರ್ತರ ಹೃದಯದಲ್ಲಿ ವಿಶೇಷ ಸ್ಥಾನ ಇದೆ. ಗಾಂಧಿ ಕುಟುಂಬವು ಎಂದಿಗೂ ಕಾಂಗ್ರೆಸ್‌ನ ಆಧಾರಸ್ತಂಭವಾಗಿ ಉಳಿಯಲಿದೆ. ಈ ಕುಟುಂಬವೇ ನಮ್ಮ ಆತ್ಮಸಾಕ್ಷಿ ಹಾಗೂ ಮಾರ್ಗದರ್ಶನ ನೀಡುವ ಶಕ್ತಿಯಾಗಿರಲಿದೆ' ಎಂದಿದ್ದಾರೆ.

               'ಭಾರತ್‌ ಜೋಡೊ ಯಾತ್ರೆಗೆ ಉತ್ತಮ ಸ್ಪಂದನೆ ದೊರೆಯುತ್ತಿದ್ದು, ಯಶಸ್ವಿಯಾಗಿ ನಡೆಯುತ್ತಿದೆ. ಗಾಂಧಿ ಕುಟುಂಬವು ಹೊಂದಿರುವ ಜನಪರ ಕಾಳಜಿಗೆ ಈ ಯಾತ್ರೆ ಪುರಾವೆಯಾಗಿದೆ' ಎಂದು ತಿಳಿಸಿದ್ದಾರೆ.


ಕಾಮೆಂಟ್‌‌ ಪೋಸ್ಟ್‌ ಮಾಡಿ

0 ಕಾಮೆಂಟ್‌ಗಳು
* Please Don't Spam Here. All the Comments are Reviewed by Admin.

Top Post Ad

Click to join Samarasasudhi Official Whatsapp Group

Qries

Qries

Below Post Ad


ಜಾಹಿರಾತು














Qries