ಕಾಸರಗೋಡು: ಕನ್ನಡ ಸಾಹಿತ್ಯ ಪರಿಷತ್ ಕೇರಳ ಗಡಿ ನಾಡ ಘಟಕ ವತಿಯಿಂದ 13ನೇ ಕಾಸರಗೋಡು ಜಿಲ್ಲಾ ಕನ್ನಡ ಸಾಹಿತ್ಯ ಸಮ್ಮೇಳನ ಡಿ. 31ಹಾಗೂ ಜ. 1ರಂದು ಪೆರ್ಲ ಶ್ರೀ ಸತ್ಯನಾರಾಯಣ ಪ್ರೌಢಶಾಲೆಯಲ್ಲಿ ಜರುಗಲಿರುವುದು. ಕಾರ್ಯಕ್ರಮದ ಯಶಸ್ವಿಗಾಗಿ ಸ್ವಾಗತ ಸಮಿತಿ ರಚನಾ ಸಭೆ ಪೆರ್ಲ ಶ್ರೀ ಸತ್ಯನಾರಾಯಣ ಪ್ರೌಢಶಾಲಾ ಗ್ರಂಥಾಲಯ ಸಭಾಂಗಣದಲ್ಲಿ ಜರುಗಿತು. ಕನ್ನಡ ಸಹಿತ್ಯ ಪರಿಷತ್ ಕೇರಳ ಗಡಿನಾಡ ಘಟಕ ಅಧ್ಯಕ್ಷ ಎಸ್.ವಿ ಭಟ್ ಅಧ್ಯಕ್ಷತೆ ವಹಿಸಿದ್ದು. ಈ ಸಂದರ್ಭ ಮಾತನಾಡಿದ ಅವರು 13ನೇ ಕಾಸರಗೋಡು ಜಿಲ್ಲಾ ಕನ್ನಡ ಸಾಹಿತ್ಯ ಸಮ್ಮೇಳನವನ್ನು ಎಲ್ಲ ಕನ್ನಡಪರ ಸಂಘಟನೆಗಳು, ಸಮಸ್ತ ಕನ್ನಡಿಗರ ಸಹಕಾರದೊಂದಿಗೆ ನಡೆಸಲು ತೀರ್ಮಾನಿಸಲಾಗಿದೆ. ಕರೊನಾ ಹಿನ್ನೆಲೆಯಲ್ಲಿ ಜಿಲ್ಲಾ ಸಮ್ಮೇಳನ ನಡೆಸುವುದಕ್ಕೆ ತೊಡಕಾಗಿದ್ದು, ಈ ಬಾರಿ ಈ ಹಿಂದಿನ ವೈಭವದೊಂದಿಗೆ ಮತ್ತೆ ಸಮ್ಮೇಳನ ನಡೆಸಲಾಗುವುದು. ಎರಡು ದಿವಸಗಳ ಕಾಲ ಕನ್ನಡ ಜಾತ್ರೆ ನಡೆಯಲಿದ್ದು, ಸಂಭ್ರಮದ ಮೆರವಣಿಗೆ, ಸಮ್ಮೇಳನದ ಉದ್ಘಾಟನೆ, ಗೋಷ್ಠಿಗಳು, ವಿವಿಧ ಕಲಾಪ್ರಕಾರಗಳು ಪ್ರದರ್ಶನಗೊಳ್ಳಲಿದೆ ಎಂದು ತಿಳಿಸಿದರು. ಈ ಸಂದರ್ಭ ಸ್ವಾಗತ ಸಮಿತಿ ಪದಾಧಿಕಾರಿಗಳ ಆಯ್ಕೆ ನಡೆಯಿತು.
ಕಾಸರಗೋಡು ಜಿಲ್ಲಾ ಪಂಚಾಯಿತಿ ಸದಸ್ಯ ನಾರಾಯಣ ನಾಯ್ಕ್ ಮುಖ್ಯ ಅತಿಥಿಯಾಗಿ ಭಾಗವಹಿಸಿ ಮಾತನಾಡಿ, ಅಕ್ಷರ ಜಾತ್ರೆಯ ಯಶ್ಸಸ್ಸು ಸಮಸ್ತೆ ಕನ್ನಡಿಗರ ಹೊಣೆಯಾಗಿದೆ. ಎರಡು ದಿವಸಗಳ ಕಾಲ ನಡೆಯುವ ಕನ್ನಡ ಸಾಹಿತ್ಯ ಸಮ್ಮೇಳನಕ್ಕೆ ಸಂಘ ಸಂಸ್ಥೆಗಳು ಶಿಕ್ಷಣ ಸಂಸ್ಥೆಗಳು ಸೇರಿದಂತೆ ಸಮಸ್ತ ಕನ್ನಡಿಗರು ಕೈಜೋಡಿಸಬೇಕಾದ ಅನಿವಾರ್ಯತೆ ಇದೆ ಎಂದು ತಿಳಿಸಿದರು. ಪೆರ್ಲ ಶಾಲಾ ಮುಖ್ಯೋಪಾಧ್ಯಾಯ ರಾಜೇಂದ್ರ ಬಿ. ಉಪಸ್ಥಿತರಿದ್ದರು. ಕಸಾಪ ಗಡಿನಾಡ ಘಟಕ ಪದಾಧಿಕಾರಿಗಳು, ಶಿಕ್ಷಕರು, ಸಂಘ ಸಂಸ್ಥೆ ಪದಾಧಿಕಾರಿಗಳು ಉಪಸ್ಥಿತರಿದ್ದರು. ಗಣೇಶ್ ಪ್ರಸಾದ್ ಪಾಣೂರು ವಂದಿಸಿದರು.
ಕಾಸರಗೋಡು ಜಿಲ್ಲಾ ಕನ್ನಡ ಸಾಹಿತ್ಯ ಸಮ್ಮೇಳನ-ಸ್ವಾಗತ ಸಮಿತಿ ರಚನಾ ಸಭೆ
0
ಅಕ್ಟೋಬರ್ 24, 2022
Tags